ವಿರುಧುನಗರ (ತಮಿಳುನಾಡು): ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ.
ಶಿವಕಾಶಿಯ ಚಿನ್ನಕಾಮನಪಟ್ಟಿಯ ಖಾಸಗಿ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆಯೇ ಸುಟ್ಟು ಹೋಗಿದ್ದು, ದಟ್ಟ ಹೊಗೆ ಆವರಿಸಿತ್ತು. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ದುರಂತದಲ್ಲಿ ಇಬ್ಬರು ಮಹಿಳೆ ಸೇರಿದಂತೆ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.==
ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 36ಕ್ಕೆಮೃತರ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ
ಪಿಟಿಐ ಹೈದರಾಬಾದ್
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತರಾದ ಕಾರ್ಮಿಕರ ಸಂಖ್ಯೆ 36ಕ್ಕೇರಿದೆ.ರಾಸಾಯಾನಿಕ ಕ್ರಿಯೆಯಿಂದಾಗಿ ಉಂಟಾದ ಸ್ಫೋಟದಲ್ಲಿ ಸೋಮವಾರ 15 ಜನ ಸಾವನ್ನಪ್ಪಿದ್ದು ದೃಢಪಟ್ಟಿತ್ತು. ಆದರೆ ಅವಶೇಷಗಳ ಅಡಿ ಇನ್ನೂ 21 ಶವ ಮಂಗಳವಾರ ಸಿಕ್ಕಿವೆ. ಇದರಿಂದ ಸಾವಿನ ಸಂಖ್ಯೆ ಏರಿದೆ. ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು, ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಸಿಎಂ ಭೇಟಿ:ಮಂಗಳವಾರ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ‘ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ 1 ಕೋಟಿ ರು. ಪರಿಹಾರವನ್ನು ನೀಡಲಾಗುತ್ತದೆ. ಗಂಭೀರವಾಗಿ ಗಾಯಗೊಂಡವರಿಗೆ 10 ಲಕ್ಷ ರು, ಗಾಯಾಳುಗಳಿಗೆ 5 ಲಕ್ಷ ರು. ನೀಡಲಾಗುತ್ತದೆ. ಪರಿಹಾರ ನೀಡುವುದರ ಬಗ್ಗೆ ಕಂಪನಿ ಜೊತೆ ಕೂಡ ಸರ್ಕಾರ ಮಾತುಕತೆ ನಡೆಸಲಿದೆ’ ಎಂದರು.
ಇದೇ ವೇಳೆ ಸ್ಫೋಟದಿಂದ ದೊಡ್ಡ ಅನಾಹುತ ನಡೆದರೂ, ಗಾಯಾಳುಗಳನ್ನು ಕಂಪನಿಯವರು ಮಾತನಾಡಿಸಿಲ್ಲ. ಮೃತರ ಕುಟುಂಬವನ್ನು ಭೇಟಿ ಮಾಡಿಲ್ಲ ಎಮದು ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್‌ನ ಮಂಡಳಿಯ ವಿರುದ್ಧ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.==ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವುವಿರುಧುನಗರ (ತಮಿಳುನಾಡು): ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ.
ಶಿವಕಾಶಿಯ ಚಿನ್ನಕಾಮನಪಟ್ಟಿಯ ಖಾಸಗಿ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆಯೇ ಸುಟ್ಟು ಹೋಗಿದ್ದು, ದಟ್ಟ ಹೊಗೆ ಆವರಿಸಿತ್ತು. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ದುರಂತದಲ್ಲಿ ಇಬ್ಬರು ಮಹಿಳೆ ಸೇರಿದಂತೆ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ