ಶಬರಿಮಲೆ ಚಿನ್ನಕ್ಕೆ ಕನ್ನ: ಟಿಡಿಬಿ ಮಾಜಿ ಅಧ್ಯಕ್ಷ ವಾಸು ಬಂಧನ

KannadaprabhaNewsNetwork |  
Published : Nov 12, 2025, 02:00 AM IST
ವಾಸು | Kannada Prabha

ಸಾರಾಂಶ

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಂಗಳವಾರ ತಿರುವಾಂಕೂರು ದೇವಸ್ವಂ ಮಂಡಳಿ( ಟಿಡಿಬಿ) ಮಾಜಿ ಅಧ್ಯಕ್ಷ ಎನ್‌.ವಾಸು ಅವರನ್ನು ವಿಚಾರಣೆ ಬಳಿಕ ಬಂಧಿಸಿದ್ದಾರೆ.

ಪಿಟಿಐ ತಿರುವನಂತಪುರಂ

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಂಗಳವಾರ ತಿರುವಾಂಕೂರು ದೇವಸ್ವಂ ಮಂಡಳಿ( ಟಿಡಿಬಿ) ಮಾಜಿ ಅಧ್ಯಕ್ಷ ಎನ್‌.ವಾಸು ಅವರನ್ನು ವಿಚಾರಣೆ ಬಳಿಕ ಬಂಧಿಸಿದ್ದಾರೆ. ರಾಜ್ಯ ಸರ್ಕಾರದ ಪ್ರಭಾವಿ ನಾಯಕರಿಗೆ ಆಪ್ತರಾಗಿರುವ ವಾಸು ಬಂಧನ ಇದೀಗ ಪ್ರಕರಣದಲ್ಲಿ ಮಹತ್ವದ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗಾಗಲೇ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜೊತೆಗೆ ಇಬ್ಬರು ಹಿರಿಯ ಅಧಿಕಾರಿಗಳು ಮತ್ತು ನಿವೃತ್ತ ಅಧಿಕಾರಿಯನ್ನು ಬಂಧನ ಮಾಡಿದೆ.

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: ಮತ್ತೆ 6 ನಕ್ಸಲೀಯರ ಹತ್ಯೆಬಿಜಾಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಇದರ ಭಾಗವಾಗಿ ಮಂಗಳವಾರ 6 ನಕ್ಸಲರು, ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ. ಈ ಮೂಲಕ ಈ ವರ್ಷದಲ್ಲಿ 259 ಮಾವೋವಾದಿಗಳನ್ನು ಭದ್ರತಾ ಪಡೆಗಳು ಪರಲೋಕಕ್ಕೆ ಕಳುಹಿಸಿವೆ.ಇಲ್ಲಿನ ಇಂದ್ರವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಹಲವು ಗಂಟೆಗಳ ಗುಂಡಿನ ಚಕಮಕಿಯಲ್ಲಿ 6 ನಕ್ಸಲರ ಮೃತದೇಹವನ್ನು ಪಡೆಗಳು ವಶಪಡಿಸಿಕೊಂಡಿದ್ದು, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಮೂಲಕ ಛತ್ತೀಸ್‌ಗಢ ಒಂದೇ ರಾಜ್ಯದಲ್ಲಿ ಒಂದೇ ವರ್ಷದಲ್ಲಿ 259 ನಕ್ಸಲರು ಹತರಾಗಿದ್ದು, ಅದರಲ್ಲಿ 230 ಜನರು ಬಸ್ತರ್‌ ಜಿಲ್ಲೆಯೊಂದರಲ್ಲಿಯೇ ಬಲಿಯಾಗಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ನಾನು ಸ್ಮಾರ್ಟ್‌ಫೋನ್‌, ಇಂಟರ್ನೆಟ್‌ ಬಳಸಲ್ಲ: ದೋವಲ್‌
ಅಮೆರಿಕ ನಿಗೂಢ ಅಸ್ತ್ರದಿಂದ ವೆನಿಜುವೆಲನ್ನರಿಗೆ ರಕ್ತ ವಾಂತಿ!