ನವದೆಹಲಿ : ಕಳೆದ ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ‘ಮತಗಳ್ಳತನ’ವಾಗಿದೆ ಎಂದು ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಗ್ಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಹೇಳಿಕೆ ನಿಜ. ಆದರೆ, ‘ಮತಗಳ್ಳತನ’ವಾಗಿದೆ ಎಂದು ರಾಹುಲ್ ಹೇಳಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಲ್ಲ, ಬದಲಿಗೆ
ದೆಹಲಿಯಲ್ಲಿ ಶುಕ್ರವಾರ ನಡೆದ ‘ಭಾಗೀದಾರ್ ನ್ಯಾಯ್ ಸಮ್ಮೇಳನ’ದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತಗಳ್ಳತನವಾಗಿದೆ ಎಂಬ ರಾಹುಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಮತ ಎಣಿಕೆಯ ವೇಳೆ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುಂದೆ ಇತ್ತು. ಆದರೆ ಮಹದೇವಪುರ ಕ್ಷೇತ್ರದಿಂದಾಗಿ ಪಕ್ಷ ಸೋಲುವಂತಾಯಿತು. ಈ ರೀತಿ ಆಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಅವರು, ಈ ಬಗ್ಗೆ ಸಾಕ್ಷ್ಯಾಧಾರಗಳು ಇವೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಮತಗಳವು ಆಗಿದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಸತ್ಯವಾದುದ್ದು. ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು ಮತ್ತು ಚುನಾವಣಾ ಕ್ಷೇತ್ರಕ್ಕೆ ಸಂಬಂಧಪಡದ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ರೀತಿ ಇಡೀ ದೇಶದಲ್ಲಿ ನಡೆದಿರುವ ಸಾಧ್ಯತೆಯಿದೆ. ಆದ್ದರಿಂದ ರಾಹುಲ್ ಗಾಂಧಿ ಅವರು ಈ ಗಂಭೀರ ವಿಚಾರವನ್ನು ಸದನದ ಒಳಗೆ ಹಾಗೂ ಹೊರಗೆ ಪ್ರಸ್ತಾಪಿಸಿದ್ದಾರೆ ಎಂದರು.
ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಭಾರಿ ಅಕ್ರಮ ನಡೆದಿದೆ, ಇದಕ್ಕೆ ಶೇ.100ರಷ್ಟು ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾನೂ ತನಿಖೆ ಮಾಡಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಗೋಲ್‌ಮಾಲ್‌ಗಳು ಆಗಿವೆ ಎಂದು ಹೇಳಿದ್ದರು. ಇದೀಗ ಅಕ್ರಮ ನಡೆದಿರುವುದು ಬೆಂಗಳೂರು ಗ್ರಾಮಾಂತರದಲ್ಲಿ ಅಲ್ಲ, ಬೆಂಗಳೂರು ಸೆಂಟ್ರಲ್ ವ್ಯಾಪ್ತಿಯ ಮಹದೇವಪುರ ಕ್ಷೇತ್ರದಲ್ಲಿ ಎಂಬುದು ರಾಹುಲ್ ವಾದವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪಿ.ಸಿ. ಮೋಹನ್ ಹಾಗೂ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಸ್ಪರ್ಧಿಸಿದ್ದರು. ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ 80 ಸಾವಿರ ಲೀಡ್‌ನಲ್ಲಿದ್ದರು. ಕಾಂಗ್ರೆಸ್ಸಿಗರು ಗೆದ್ದೇಬಿಟ್ಟೆವು ಎಂಬ ಸಂಭ್ರಮದಲ್ಲಿದ್ದರು. ಆದರೆ ಮಹದೇವಪುರ, ಸಿ.ವಿ.ರಾಮನ್ ನಗರ, ಗಾಂಧಿನಗರ ಕ್ಷೇತ್ರಗಳಲ್ಲಿ ಅವರಿಗೆ ತೀವ್ರ ಹಿನ್ನಡೆಯಾಗಿತ್ತು. ಪಿ.ಸಿ. ಮೋಹನ್ ಚುನಾಯಿತರಾಗಿದ್ದರು.