ಜಾರ್ಖಂಡ್‌ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

KannadaprabhaNewsNetwork |  
Published : Feb 27, 2024, 01:30 AM IST
ಗೀತಾ | Kannada Prabha

ಸಾರಾಂಶ

ಕಾಂಗ್ರೆಸ್ಸಲ್ಲಿ ಗಾಂಧಿ ಕುಟುಂಬಕ್ಕಷ್ಟೇ ಮನ್ನಣೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿರುವ ಗೀತಾ ಕೋಡಾ ಕಿಡಿ ಕಾರಿದ್ದಾರೆ.

ರಾಂಚಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರ್ಖಂಡ್‌ನ ಸಿಂಗ್‌ಭೂಂ ಕ್ಷೇತ್ರದ ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾರ್ಖಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಬಾಬುಲಾಲ್‌ ಮರಾಂಡಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಗೀತಾ ಮಾತನಾಡಿ, ‘ಕಾಂಗ್ರೆಸ್‌ ಪಕ್ಷವು ಓಲೈಕೆ ರಾಜಕಾರಣ ಮಾಡುತ್ತಾ ರಾಷ್ಟ್ರವನ್ನು ಸಂಕಷ್ಟದಲ್ಲಿ ಸಿಲುಕಿಸಿದೆ. ಅವರು ಎಲ್ಲರನ್ನೂ ಒಳಗೊಳ್ಳುವ ಕುರಿತು ಮಾತನಾಡಿದರೂ ಕೇವಲ ಗಾಂಧಿ ಕುಟುಂಬಕ್ಕೆ ಮಾತ್ರ ಪಕ್ಷದಲ್ಲಿ ಪ್ರಾಧಾನ್ಯತೆ ಕೊಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷ ತೊರೆದಿದ್ದೇನೆ’ ಎಂದರು. ಗೀತಾ ಕೋಡಾ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸಿಂಗ್‌ಭೂಂ ಮೀಸಲು ಕ್ಷೇತ್ರದ ಟಿಕೆಟ್‌ ದೊರೆಯುವ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರಿದ್ದಾರೆ ಎನ್ನಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ ಆಫರ್‌!
ಬ್ರಹ್ಮಪುತ್ರಾ ನದಿ ಮೇಲೆ ಅತ್ಯಾಧುನಿಕ 6 ಪಥದ ಸೇತುವೆ