ಫೀಲ್ಡ್‌ ಮಾರ್ಷಲ್‌ ಆಗಿ ಪಾಕ್‌ ಸೇನಾ ಮುಖ್ಯಸ್ಥ ಬಡ್ತಿ!

KannadaprabhaNewsNetwork |  
Published : May 21, 2025, 02:03 AM IST
ಮುನೀರ್‌  | Kannada Prabha

ಸಾರಾಂಶ

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನದಲ್ಲಿ ಪಾಕ್‌ ಭಾರಿ ಹಿನ್ನಡೆ ಅನುಭವಿಸಿದ್ದರೂ, ಪಾಕಿಸ್ತಾನ ಸರ್ಕಾರವು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ದೇಶದ ಅತ್ಯುನ್ನತ ಮಿಲಿಟರಿ ಶ್ರೇಣಿ ಆಗಿರುವ ಫೀಲ್ಡ್‌ ಮಾರ್ಷಲ್‌ ರ್‍ಯಾಂಕ್‌ ದಯಪಾಲಿಸಿದೆ.

- ಯುದ್ಧದಲ್ಲಿ ಹಿನ್ನಡೆ ಆದರೂ ಸೇನೆಯ ಅತ್ಯುಚ್ಚ ಶ್ರೇಣಿ

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನದಲ್ಲಿ ಪಾಕ್‌ ಭಾರಿ ಹಿನ್ನಡೆ ಅನುಭವಿಸಿದ್ದರೂ, ಪಾಕಿಸ್ತಾನ ಸರ್ಕಾರವು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ದೇಶದ ಅತ್ಯುನ್ನತ ಮಿಲಿಟರಿ ಶ್ರೇಣಿ ಆಗಿರುವ ಫೀಲ್ಡ್‌ ಮಾರ್ಷಲ್‌ ರ್‍ಯಾಂಕ್‌ ದಯಪಾಲಿಸಿದೆ.

ಈ ಬಗ್ಗೆ ಪಾಕಿಸ್ತಾನ ಪ್ರಧಾನಿ ಮಂತ್ರಿ ಕಾರ್ಯಾಲಯ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ‘ಮುನೀರ್‌ಗೆ ಫೀಲ್ಡ್‌ ಮಾರ್ಷಲ್ ಆಗಿ ಪದೋನ್ನತಿ ನೀಡಲಾಗಿದೆ. ಈ ಪ್ರಸ್ತಾಪಕ್ಕೆ ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮತಿ ದೊರೆತಿದೆ’ ಎಂದಿದೆ,‘ಭಾರತದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸಶಸ್ತ್ರ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಕಾರಣಕ್ಕೆ ಅವರಿಗೆ ಪದೋನ್ನತಿ ನೀಡಲಾಗಿದೆ. ಅವರ ಅನುಕರಣೀಯ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ’ಎಂದು ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!