ಬಿಹಾರದಲ್ಲಿ ಸರಣಿ ಸೇತುವೆ ದುರಂತದ ಬೆನ್ನಲ್ಲೇ ಜಾರ್ಖಂಡ್‌ನಲ್ಲಿಯೂ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ.
ಗಿರಿದಿಹ್: ಬಿಹಾರದಲ್ಲಿ ಸರಣಿ ಸೇತುವೆ ದುರಂತದ ಬೆನ್ನಲ್ಲೇ ಜಾರ್ಖಂಡ್‌ನಲ್ಲಿಯೂ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಭಾರೀ ಮಳೆಗೆ ಕಾಮಗಾರಿ ಪ್ರಗತಿಯಲ್ಲಿದ್ದ ಸೇತುವೆಯ ಗರ್ಡರ್ ಕುಸಿದು ಮತ್ತು ಪಿಲ್ಲರ್ ವಾಲಿ ಈ ಘಟನೆ ಸಂಭವಿಸಿದೆ.
ಸುಮಾರು 5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ. ರಾಂಚಿಯಿಂದ ಸುಮಾರು 235 ಕಿಮೀ ದೂರದಲ್ಲಿರುವ ಡಿಯೋರಿ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಡುಮ್ರತೋಲಾ ಮತ್ತು ಕರಿಪಾರ್ಹಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಫತೇಪುರ್ ಮತ್ತು ಭೇಲ್ವಾಗತಿ ನಡುವೆ ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ದುರಂತದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ.‘ಭಾರೀ ಮಳೆಗೆ ಸೇತುವೆ ಕುಸಿದಿದೆ.
‘ಗರ್ಡರ್ ಕುಸಿದು ಪಿಲ್ಲರ್ ವಾಲಿದೆ. ಸೇತುವೆಯನ್ನು ಮರು ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ತಿಳಿಸಲಾಗುವುದು’ ಎಂದು ಗಿರಿದಿಹ್ ರಸ್ತೆ ನಿರ್ಮಾಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್ ತಿಳಿಸಿದ್ದಾರೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.