ಮಧ್ಯಪ್ರದೇಶದ ಕಾಡಲ್ಲಿ ನಿಂತಿದ್ದ ಕಾರಲ್ಲಿ 52 ಕೇಜಿ ಚಿನ್ನ, 11 ಕೋಟಿ ರು . ನಗದು ಪತ್ತೆ

KannadaprabhaNewsNetwork |  
Published : Dec 21, 2024, 01:19 AM ISTUpdated : Dec 21, 2024, 04:19 AM IST
ಮಧ್ಯಪ್ರದೇಶ | Kannada Prabha

ಸಾರಾಂಶ

ಮಧ್ಯಪ್ರದೇಶದ ಮಂಡೋರಾ ಜಿಲ್ಲೆಯ ಮಿಂದೋರಿ ಕಾಡಿನ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಇನ್ನೋವಾ ಕಾರಲ್ಲಿ ಬರೋಬ್ಬರಿ 40 ಕೋಟಿ ರು. ಮೌಲ್ಯದ 52 ಕೇಜಿ ಚಿನ್ನ ಮತ್ತು 11 ಕೋಟಿ ರು. ಪತ್ತೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಭೋಪಾಲ್‌: ಮಧ್ಯಪ್ರದೇಶದ ಮಂಡೋರಾ ಜಿಲ್ಲೆಯ ಮಿಂದೋರಿ ಕಾಡಿನ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಇನ್ನೋವಾ ಕಾರಲ್ಲಿ ಬರೋಬ್ಬರಿ 40 ಕೋಟಿ ರು. ಮೌಲ್ಯದ 52 ಕೇಜಿ ಚಿನ್ನ ಮತ್ತು 11 ಕೋಟಿ ರು. ಪತ್ತೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ವಾರಸುದಾರರಿಲ್ಲದ ಕಾರಿನಲ್ಲಿ ಏಳೆಂಟು ಬ್ಯಾಗ್‌ಗಳಿರುವುದು ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದು ಹಣ ವಶಪಡಿಸಿಕೊಂಡಿದ್ದಾರೆ. ಈ ಚಿನ್ನ ನಗದು ಯಾರಿಗೆ ಸೇರಿದ್ದೂ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಇದು ಹಿಂದೆ ಆರ್‌ಟಿಒ ಅಧಿಕಾರಿಯಾಗಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಸೌರಭ್‌ ಶರ್ಮಾ ಅವರಿಗೆ ಸೇರಿದ ಹಣ ಎಂದು ಕೆಲವು ಮೂಲಗಳು ಹೇಳಿವೆ. ಏಕೆಂದರೆ ಹಣ ಪತ್ತೆಯಾಗಿರುವ ಇನ್ನೋವಾ ಕಾರು ಚಂದನ್ ಸಿಂಗ್ ಗೌರ್‌ ಎನ್ನುವ ಬಿಲ್ಡರ್‌ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ತಿಳಿದು ಬಂದಿದೆ.

ಗುರುವಾರವಷ್ಟೇ ಸೌರಭ್ ಶರ್ಮಾ ಹಾಗೂ ಸಹಚರ ಚಂದನ್ ಸಿಂಗ್ ಗೌರ್‌ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡದಿತ್ತು. . ಶರ್ಮಾ ಮನೆಯಲ್ಲಿ ಈ ವೇಳೆ 2.5 ಕೋಟಿ ರು. ನಗದು, ಚಿನ್ನ, ಬೆಳ್ಳಿ ಆಭರಣಗಳು ಮತ್ತು ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು. ಈ ಆಸ್ತಿಗಳ ಮೌಲ್ಯವೇ 3 ಕೋಟಿಗೂ ಅಧಿಕವಾಗಿತ್ತು. ಈಗ ಕಾರಲ್ಲಿ ಸಿಕ್ಕ ಹಣ ಮತ್ತು ಚಿನ್ನವೂ ಅವರದ್ದೇ ಎಂದು ಹೇಳಲಾಗಿದೆ. ಅಧಿಕಾರಿಗಳ ಕೈಗೆ ಸಿಗಬಾರದೆಂದು ಅವರು ಹಣ, ಚಿನ್ನವನ್ನು ಹೀಗೆ ಮುಚ್ಚಿಟ್ಟಿರಬಹುದು ಎಂದು ಊಹಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮಹಿಳೆಗೆ ಕಿರುಕುಳ : ಇಂದೋರ್‌ ಡಾನ್ಸಿಂಗ್‌ ಕಾಪ್‌ಗೆ ಹಿಂಬಡ್ತಿ!
ಸುನೇತ್ರಾ ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ