ಪರೀಕ್ಷಾ ಅಕ್ರಮಕ್ಕೆ10 ವರ್ಷ ಜೈಲು: 5ರಂದು ಮಸೂದೆ ಮಂಡನೆ?

KannadaprabhaNewsNetwork |  
Published : Feb 01, 2024, 02:04 AM ISTUpdated : Feb 01, 2024, 09:06 AM IST
ಪರೀಕ್ಷೆ | Kannada Prabha

ಸಾರಾಂಶ

ಪರೀಕ್ಷಾ ಅಕ್ರಮಗಳ ತಡೆಗಟ್ಟುವಿಕೆ ಮಸೂದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಅಕ್ರಮಕ್ಕೆ 10 ವರ್ಷ ಜೈಲಿನ ಜತೆಗೆ 1 ಕೋಟಿ ರು. ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎನ್ನಲಾಗಿದೆ.

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ಮತ್ತು ಅಕ್ರಮಗಳನ್ನು ಎಸಗುವವರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ರು. ದಂಡ ವಿಧಿಸುವ ಕಠಿಣ ಕಾನೂನನ್ನು ಒಳಗೊಂಡಿರುವ ‘ಪಬ್ಲಿಕ್ ಎಕ್ಸಾಮಿನೇಷನ್’ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆಯನ್ನು ಸರ್ಕಾರವು ಸಂಸತ್ತಿನಲ್ಲಿ ಸೋಮವಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಈ ಮಸೂದೆಗೆ ಅನುಮೋದನೆ ನೀಡಿದೆ. ಹೀಗಾಗಿ ಶೀಘ್ರವೇ ಮಸೂದೆ ಮಂಡನೆ ಮಾಡಲಾಗುತ್ತದೆ.

ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಪರೀಕ್ಷೆಗಳಲ್ಲಿ ಅಕ್ರಮ ಎಸಗುವ ಸರ್ಕಾರಿ ಅಧಿಕಾರಿಗಳು ಹಾಗೂ ಅವರಿಂದ ಎಸಗಲ್ಪಡುವ ಸಂಘಟಿತ ಅಪರಾಧದ ಮಾಫಿಯಾವನ್ನು ಗುರಿಯಾಗಿಸಿ ಈ ಮಸೂದೆ ರಚಿಸಲಾಗಿದೆ. 

ಇದು ಕೇಂದ್ರ ಕಾನೂನು ಮತ್ತು ಜಂಟಿ ಪ್ರವೇಶ ಪರೀಕ್ಷೆಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಕ್ಕಾಗಿ ನಡೆಯುವ ಪರೀಕ್ಷೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ಮೇಲ್ವಿಚಾರಣೆ ಮಾಡುತ್ತದೆ. 

ಇತ್ತೀಚೆಗೆ ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮಾಡಲು ಸಹಕಾರ, ಲಂಚ ಪಡೆದು ನೌಕರಿ ನೀಡುವುದು ಸೇರಿದಂತೆ ಅನೇಕ ವ್ಯವಹಾರಗಳು ಬೆಳಕಿಗೆ ಬಂದಿವೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ