ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ಯತ್ನ: ಮೋದಿ

KannadaprabhaNewsNetwork |  
Published : Feb 20, 2024, 01:50 AM ISTUpdated : Feb 20, 2024, 08:13 AM IST
modi d

ಸಾರಾಂಶ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ರೈತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲಖನೌ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ರೈತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಪ್ರತಿಭಟನಾನಿರತ ರೈತರಿಗೆ ಕೇಂದ್ರ ಸರ್ಕಾರ ಹೊಸ ಪ್ರಸ್ತಾವಗಳನ್ನು ಮುಂದಿಟ್ಟಿರುವ ಬೆನ್ನಲ್ಲೇ ಪ್ರಧಾನಿ ಸಹ ಈ ಬಗ್ಗೆ ಮಾತನಾಡಿದ್ದಾರೆ.

ಲಖನೌನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಇಡೀ ಪ್ರಪಂಚದ ಊಟದ ಟೇಬಲ್‌ಗಳ ಮೇಲೆ ಭಾರತದ ಖಾದ್ಯಗಳನ್ನು ಇಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. 

ನಮ್ಮ ದೇಶದ ಕೃಷಿಯನ್ನು ಹೊಸ ಹಾದಿಯಲ್ಲಿ ಕೊಂಡೊಯ್ಯಲು ನಾವು ರೈತರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ನೈಸರ್ಗಿಕ ಕೃಷಿ ಮತ್ತು ಸಿರಿಧಾನ್ಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.

ಅಲ್ಲದೇ ರೈತರಿಗೆ ಅನುಕೂಲ ಒದಗಿಸಿದರೆ ಅದು ಹೂಡಿಕೆದಾರರಿಗೂ ಅನುಕೂಲ ಮಾಡಿದಂತೆ. ಹೀಗಾಗಿಯೇ ರೈತರ ಉದ್ಧಾರಕ ಎನಿಸಿಕೊಂಡಿದ್ದ ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರಿಗೆ ನಮ್ಮ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿದೆ ಎಂದು ಅವರು ಹೇಳಿದ್ದಾರೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಭಾರತ-ಇಂಗ್ಲೆಂಡ್‌ ಸರಣಿ ಕ್ಲೈಮ್ಯಾಕ್ಸ್‌ ಇಂದು !