ಕ್ಷೇತ್ರ ಮರುವಿಂಗಡಣೆ ವಿರುದ್ಧ ವಿಪಕ್ಷ ಜಂಟಿ ಹೋರಾಟ : ಖರ್ಗೆ

KannadaprabhaNewsNetwork |  
Published : Apr 11, 2026, 01:45 AM IST
Mallikarjun Kharge

ಸಾರಾಂಶ

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಹಾಗೂ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ರಮದಿಂದ ದೇಶದ ಚುನಾವಣಾ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ - ಕಾಂಗ್ರೆಸ್‌

 ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಹಾಗೂ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ರಮದಿಂದ ದೇಶದ ಚುನಾವಣಾ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಇದರ ವಿರುದ್ಧ ವಿಪಕ್ಷಗಳ ಜೊತೆಗೂಡಿ ಜಂಟಿ ಹೋರಾಟ ನಡೆಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಏ.15ಕ್ಕೆ ವಿಪಕ್ಷಗಳ ಸಭೆ ಆಯೋಜಿಸಿದೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ

ಶುಕ್ರವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ (ಸಿಡಬ್ಲ್ಯುಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಘೋಷಣೆ ಮಾಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕೇಂದ್ರದ ಕ್ರಮಗಳಿಂದ ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತವೆ. ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಮೋದಿ ಸರ್ಕಾರ ಏ.16ರಿಂದ ಅಧಿವೇಶನ ಕರೆಯುತ್ತಿದೆ. ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಾಧ್ಯವಾದಷ್ಟು ಬೇಗ ಅಂಗೀಕರಿಸಲು ಅವರು ಮುಂದಾಗಿದ್ದಾರೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ, ವಿಪಕ್ಷದ ನಮ್ಮ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ, ಸಾಮೂಹಿಕ ಕಾರ್ಯತಂತ್ರವನ್ನು ರೂಪಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ’ ಎಂದು ತಿಳಿಸಿದರು.

ಏ.15ಕ್ಕೆ ವಿಪಕ್ಷಗಳ ಸಭೆ:

‘ಕೇಂದ್ರದ ವಿರುದ್ಧ ಜಂಟಿ ಹೋರಾಟ ಕೈಗೊಳ್ಳಲು ಏ.15ಕ್ಕೆ ಮಲ್ಲಿಕಾರ್ಜುನ ಖರ್ಗೆ ವಿಪಕ್ಷಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಹೋರಾಟದ ಕಾರ್ಯತಂತ್ರಗಳನ್ನು ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕುಂಭ ಬೆಡಗಿ ಮೊನಾಲಿಸಾ ಅಪ್ರಾಪ್ತೆ : ಪತಿಯ ವಿರುದ್ಧ ಪೋಕ್ಸೋ ಕೇಸ್‌ ದಾಖಲು
ಅಮೆರಿಕ ಜತೆ ಆಟ ಆಡ್ಬೇಡಿ:ಸಂಧಾನ ಸಭೆಗೂ ಮುನ್ನಇರಾನ್‌ಗೆ ವ್ಯಾನ್ಸ್ ಎಚ್ಚರಿಕೆ