ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆ ಮಂಡನೆಗೆ ಸರ್ಕಾರ ಸಜ್ಜುನವದೆಹಲಿ: ಯಾವುದೇ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಗಳ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ ತಕ್ಷಣವೇ ಅವರನ್ನು ಹುದ್ದೆಯಿಂದ ತೆಗೆದು ಹಾಕುವ ಐತಿಹಾಸಿಕ ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ.
ಹಾಲಿ ಇರುವ ನಿಯಮಗಳ ಅನ್ವಯ, ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣಗಳಲ್ಲಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾದರೆ ಮಾತ್ರವೇ ತಮ್ಮ ಜನಪ್ರತಿನಿಧಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ. ಜೊತೆಗೆ ಶಿಕ್ಷೆ ಮುಗಿದ ಬಳಿಕ ಮತ್ತೆ 5 ವರ್ಷ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಇಲ್ಲ.