1.72 ಲಕ್ಷ ಕೋಟಿ ರು. ಜಿಎಸ್ಟಿ ಸಂಗ್ರಹ: 2ನೇ ಅತಿ ಗರಿಷ್ಠ

KannadaprabhaNewsNetwork |  
Published : Feb 01, 2024, 02:02 AM IST
ಜಿಎಸ್‌ಟಿ | Kannada Prabha

ಸಾರಾಂಶ

ಜನವರಿ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರು. ಜಿಎಸ್‌ಟಿ ತೆರಿಗೆ ಸಂಗ್ರಹವಾಗಿದೆ.

ನವದೆಹಲಿ: ಜನವರಿ ತಿಂಗಳಿನಲ್ಲಿ ಜಿಎಸ್‌ಟಿ ಸಂಗ್ರಹ ಶೇ.10ರಷ್ಟು ಹೆಚ್ಚಳವಾಗಿದ್ದು, 1.72 ಲಕ್ಷ ಕೋಟಿ ರು. ಸಂಗ್ರಹವಾಗಿದೆ.

ಇದು ಈವರೆಗಿನ 2ನೇ ಅತಿ ಹೆಚ್ಚು ಮಾಸಿಕ ಜಿಎಸ್‌ಟಿ ಸಂಗ್ರಹವಾಗಿದೆ.

ಅಲ್ಲದೇ ಈ ಆರ್ಥಿಕ ವರ್ಷದಲ್ಲಿ 3ನೇ ಬಾರಿ ಜಿಎಸ್‌ಟಿ ಸಂಗ್ರಹ 1.7 ಲಕ್ಷ ಕೋಟಿ ರು. ಗಡಿಯನ್ನು ದಾಟಿದೆ.

ಜನವರಿಯಲ್ಲಿ 1,72,129 ಕೋಟಿ ರು. ಸಂಗ್ರಹವಾಗಿದೆ. 2023ರ ಜನವರಿಯಲ್ಲಿ 1.55 ಲಕ್ಷ ಕೋಟಿ ರು. ಸಂಗ್ರಹವಾಗಿತ್ತು.

2023ರ ಏಪ್ರಿಲ್‌ನಿಂದ ಜನವರಿ ಅವಧಿಯಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಶೇ.11.6ರಷ್ಟು ಏರಿಕೆಯಾಗಿದೆ. 2023ರ ಏಪ್ರಿಲ್‌ನಲ್ಲಿ ದಾಖಲೆಯ 1.87 ಲಕ್ಷ ಕೋಟಿ ರು. ಸಂಗ್ರಹವಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಆಸ್ಟ್ರೇಲಿಯಾದಲ್ಲಿ 426 ಕೆಜಿಯ ಗಾಂಧಿ ಕಂಚಿನ ಪ್ರತಿಮೆ ಧ್ವಂಸ, ಕಳವು
6 ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ