ನವದೆಹಲಿ: ‘ಲೋಕಸಭೆ ಚುನಾವಣೆಯಲ್ಲಿ ಆಪ್ ಜೊತೆಗಿನ ಮೈತ್ರಿ ದೊಡ್ಡ ತಪ್ಪು. ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸುಳ್ಳುಗಾರ’ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಹೇಳಿಕೆ ಬಗ್ಗೆ ಆಮ್‌ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಇಂಡಿಯಾ ಕೂಟದಿಂದಲೇ ಕಾಂಗ್ರೆಸ್‌ಗೆ ಗೇಟ್ ಪಾಸ್ ನೀಡುವ ಎಚ್ಚರಿಕೆ ನೀಡಿದೆ. ಇದು ಇಂಡಿಯಾ ಕೂಟದಲ್ಲಿನ ಒಡಕನ್ನು ಮತ್ತೊಮ್ಮೆ ಬಯಲು ಮಾಡಿದೆ.
ಜೊತೆಗೆ, ದೆಹಲಿ ಚುನಾವಣೆ ಗೆಲ್ಲಲು ಬಿಜೆಪಿ ಜೊತೆ ಕಾಂಗ್ರೆಸ್ ಕೈಜೋಡಿಸಿದೆ ಎಂದು ಆರೋಪಿಸಿರುವ ಆತಿಷಿ, ಈ ಕುರಿತ ದೆಹಲಿ ಕಾಂಗ್ರೆಸ್ ನಾಯಕರ ಪಿತೂರಿಯಲ್ಲಿ, ಪಕ್ಷದ ರಾಷ್ಟ್ರೀಯ ನಾಯಕರು ಭಾಗಿಯಾಗಿಲ್ಲ ಎಂದಾದಲ್ಲಿ ದಿಲ್ಲಿ ನಾಯಕರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹ ಮಾಡಿದ್ದಾರೆ.ಇತ್ತೀಚೆಗಷ್ಟೇ ಇಂಡಿಯಾ ಕೂಟದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ನಾಯಕತ್ವದ ಬಗ್ಗೆ ಟಿಎಂಸಿ, ಸಮಾಜವಾದಿ ಪಕ್ಷ, ಆರ್‌ಜೆಡಿ ಬೆಂಬಲ ನೀಡಿವೆ. ಅದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ವಿರುದ್ಧ ಆಪ್ ಸಿಡಿದೆದ್ದಿದೆ.