ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಗೆ ಮತ ಹಾಕಿದ ಕಾರಣಕ್ಕಾಗಿ ವಿಧಾನಸಭೆಯಿಂದ ಉಚ್ಛಾಟನೆಗೊಂಡ 6 ಕಾಂಗ್ರೆಸ್ ಶಾಸಕರು, ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದಲ್ಲಿ ತಾವು ಮತ ಹಾಕಲು ಸಾಧ್ಯವಾಗಲಿಲ್ಲ ಎಂಬುದಾಗಿ ದಾವೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯಸಭೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಮತ ಹಾಕಿದ್ದರಿಂದ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ತಲಾ 34 ಮತಗಳನ್ನು ಪಡೆದು ಬಳಿಕ ಲಾಟರಿ ಡ್ರಾನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಗಿತ್ತು.