ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಬಗೆಹರಿಸಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಇದಕ್ಕಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಬುಧವಾರ ಸಂಜೆ ಶಿಮ್ಲಾಗೆ ದೌಡಾಯಿಸಿದ್ದಾರೆ. ಇದೇ ವೇಳೆ, ರಾಜೀನಾಮೆಗೆ ನಿರಾಕರಿಸಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಕೊನೆಯವರೆಗೆ ಹೋರಾಡುವುದಾಗಿ ಹೇಳಿದ್ದಾರೆ.
ಮಂಗಳವಾರ ನಡೆದ ರಾಜ್ಯಸಭೆ ಚುನಾವನೆಯಲ್ಲಿ ಕಾಂಗ್ರೆಸ್‌ನ 6 ಮಂದಿ ಶಾಸಕರು ಹಾಗೂ ಕಾಂಗ್ರೆಸ್ ಬೆಂಬಲಿಗ 3 ಪಕ್ಷೇತರ ಶಾಸಕರು ಅಡ್ಡಮತದಾನ ಮಾಡಿ ಬಿಜೆಪಿಯ ಗೆಲುವಿಗೆ ಕಾರಣವಾಗಿದ್ದರು. ಇದಾದ ಬಳಿಕ ಇವರು ನಾಪತ್ತೆಯಾಗಿ ಬುಧವಾರ ಮತ್ತೆ ಶಿಮ್ಲಾದಲ್ಲಿ ಪ್ರತ್ಯಕ್ಷ ಆಗಿದ್ದಾರೆ. ಇವರ ಆಗಮನದ ಸಮಯದಲ್ಲಿ ಬಿಜೆಪಿ ಶಾಸಕರು ‘ನಮ್ಮ ಕೆಲಸ ಸಾಧಿಸಿ ಆಗಿದೆ’ ಎಂದು ಘೋಷಣೆಯನ್ನು ಕೂಗಿರುವುದು ರಾಜ್ಯ ಸರ್ಕಾರವನ್ನು ಗೊಂದಲಕ್ಕೀಡು ಮಾಡಿದೆ.
ಹೀಗಾಗಿ ಬಂಡಾಯ ಶಾಸಕರ ಮನವೊಲಿಸುವ ಕೆಲಸವನ್ನು ನಿರ್ವಹಿಸಲು ಈಗಾಗಲೇ ಕಾಂಗ್ರೆಸ್ ಮುಂದಾಗಿದ್ದು, ಡಿಕೆಶಿ ಸೇರಿದಂತೆ ಹಿರಿಯ ನಾಯಕರನ್ನು ಹಿಮಾಚಲಕ್ಕೆ ಕಳುಹಿಸಿದೆ. ಹಲವು ನಾಯಕರ ಜತೆ ಡಿಕೆಶಿ ಸಭೆ ನಡೆಸಿದ್ದಾರೆ.ರಾಜೀನಾಮೆ ನೀಡಲ್ಲ, ಹೋರಾಡುತ್ತೇನೆ:
ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಯತ್ನ- ಕಾಂಗ್ರೆಸ್:
ಹಿಮಾಚಲದಲ್ಲಿ ಅಧಿಕಾರ ನಡೆಸುವ ಹಕ್ಕು ಕಾಂಗ್ರೆಸ್‌ಗೆ ಜನ ನೀಡಿದ್ದಾರೆ. ಇದನ್ನು ಹಣಬಲದ ಮೂಲಕ ಹಾಳು ಮಾಡಲು ಯತ್ನಿಸಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಇದು ಜನರಿಗೆ ಮಾಡುತ್ತಿರುವ ಅವಮಾನ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್: 40
ಪಕ್ಷೇತರ: 3