ರೈತರ ಆತ್ಮಹತ್ಯೆ ಬಗ್ಗೆ ಕಾಂಗ್ರೆಸ್‌ ನಿರ್ಲಕ್ಷ್ಯ: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

KannadaprabhaNewsNetwork |  
Published : Sep 29, 2024, 01:33 AM ISTUpdated : Sep 29, 2024, 05:13 AM IST
ಮೋದಿ | Kannada Prabha

ಸಾರಾಂಶ

ಹರ್ಯಾಣದಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಅವಧಿಯಲ್ಲಿ ನೂರಾರು ರೈತರ ಆತ್ಮಹತ್ಯೆ ಸಂಭವಿಸಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ. 

ಹಿಸಾರ್ (ಹರ್ಯಾಣ): ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೇರಿದಂತೆ ವಿಪಕ್ಷಗಳ ಸರ್ಕಾರಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ನೂರಾರು ರೈತರ ಆತ್ಮಹತ್ಯೆ ಸಂಭವಿಸಿವೆ. ಆದರೆ ಈ ಬಗ್ಗೆ ಅಲ್ಲಿನ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ’ ಎಂದು ಕಿಡಿಕಾರಿದ್ದಾರೆ.

ಶನಿವಾರ ಹಿಸಾರ್‌ನಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಎಂದಿಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಗಂಭೀರವಾಗಿಲ್ಲ. ಅವರ ಕಲ್ಯಾಣಕ್ಕಾಗಿ ಕೆಲಸ ಮಾಡುವುದು ಬಿಜೆಪಿ ಮಾತ್ರ. ನಾವು ರೈತರನ್ನು ಗೌರವಿಸುವ ಕಾರಣದಿಂದ ರೈತರಿಗೆ ‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ ಅಡಿ ವಾರ್ಷಿಕ ₹ 6,000 ನೀಡುತ್ತಿದ್ದೇವೆ. 

ಕಾಂಗ್ರೆಸ್ ಹರ್ಯಾಣದಲ್ಲಿ ರೈತರಿಗೆ ‘ಚಂದ್ರ’ನ ತೋರಿಸುವ ಭರವಸೆ ನೀಡುತ್ತಿದೆ. ಆದರೆ ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ನೀಡಿದ ಭರವಸೆಗಳನ್ನು ಏಕೆ ಈಡೇರಿಸುವುದಿಲ್ಲ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್‌ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಸತ್ಯವೆಂದರೆ ಕಾಂಗ್ರೆಸ್‌ ರೈತರ ಜೀವನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾರೆ ಮತ್ತು ದ್ರೋಹ ಮಾಡಿದ ಇತಿಹಾಸವನ್ನು ಹೊಂದಿದ್ದಾರೆ’ ಎಂದು ಕಿಡಿಕಾರಿದರು.

ಬರೀ ಕುರ್ಚಿ ವ್ಯಮೋಹ:ಹರ್ಯಾಣದಲ್ಲಿ ಬಾಪು (ಭೂಪಿಂದರ್‌ ಸಿಂಗ್‌ ಹೂಡಾ) ಮತ್ತು ಬೇಟಾ (ದೀಪೇಂದರ್‌ ಹೂಡಾ) ಸೇರಿದಂತೆ ಎಲ್ಲಾ ಕಾಂಗ್ರೆಸ್‌ ನಾಯಕರು ಸಿಎಂ ಆಗುವ ಬಯಕೆ ಹೊಂದಿದ್ದು, ಅದಕ್ಕಾಗಿ ತಮ್ಮಲ್ಲೇ ಪೈಪೋಟಿ ನಡೆಸುತ್ತಿದ್ದಾರೆ. ಇದರಿಂದಾಗಿ ಪಕ್ಷದ ಪಾಲಿಗೆ ಸ್ಥಿರತೆ ಎನ್ನುವುದು ದೂರದ ಮಾತು. ತನ್ನ ನಾಯಕರನ್ನೇ ಒಗ್ಗೂಡಿಸಲಾಗದ ಪಕ್ಷ, ರಾಜ್ಯದಲ್ಲಿ ಸ್ಥಿರತೆಯನ್ನು ಹೇಗೆ ಸ್ಥಾಪಿಸುತ್ತದೆ ಎಂದು ಪ್ರಶ್ನಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ