ಹುಣಸೂರಿನಲ್ಲಿ ₹10 ಕೋಟಿ ಚಿನ್ನ ದೋಚಿದ್ದವರು ಬಿಹಾರದಲ್ಲಿ ಬಲೆಗೆ

Published : Jan 19, 2026, 04:56 AM IST
Gold

ಸಾರಾಂಶ

ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಭರಣ ಮಳಿಗೆಯೊಂದರಲ್ಲಿ ಡಿ.28ರಂದು ನಡೆದಿದ್ದ 10 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

 ಭಾಗಲ್ಪುರ/ ದರ್ಭಾಂಗ: ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಭರಣ ಮಳಿಗೆಯೊಂದರಲ್ಲಿ ಡಿ.28ರಂದು ನಡೆದಿದ್ದ 10 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 

ಕರ್ನಾಟಕ ಪೊಲೀಸರ ಸಹಯೋಗದೊಂದಿಗೆ ಬಿಹಾರದ ಎಸ್‌ಟಿಎಫ್‌ ಈ ಕಾರ್ಯಾಚರಣೆ

ಬಂಧಿತರನ್ನು ಹೃಷಿಕೇಶ್‌ ಸಿಂಗ್‌ ಮತ್ತು ಪಂಕಜ್‌ ಅಲಿಯಾಸ್‌ ಸತುವಾ ಎಂದು ಗುರುತಿಸಲಾಗಿದೆ. ಕರ್ನಾಟಕ ಪೊಲೀಸರ ಸಹಯೋಗದೊಂದಿಗೆ ಬಿಹಾರದ ಎಸ್‌ಟಿಎಫ್‌ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರಿಂದ ಆಭರಣ ಮಳಿಗೆಯಲ್ಲಿ ಕಳವು ಮಾಡಿದ್ದ ಚಿನ್ನದ ಸರ, ಉಂಗುರ, 1 ಲಕ್ಷ ರು. ನಗದು, ಬೈಕ್‌ ವಶಪಡಿಸಿಕೊಳ್ಳಲಾಗಿದೆ. ಬಂಧಿತರ ಪೈಕಿ ಪಂಕಜ್‌ ಕುಮಾರ್‌ ವಿರುದ್ಧ ಕರ್ನಾಟಕ, ಬಿಹಾರ, ಜಾರ್ಖಂಡ್‌, ರಾಜಸ್ಥಾನ ರಾಜ್ಯಗಳಲ್ಲಿ ಕೊಲೆ, ಕಳ್ಳತನ ಸೇರಿದಂತೆ ಹಲವು ಪ್ರಕರಣ ದಾಖಲಾಗಿದ್ದರೆ, ಹೃಷಿಕೇಶ್‌ ವಿರುದ್ಧವೂ ಬಿಹಾರದಲ್ಲಿ 4 ಕ್ರಿಮಿನಲ್‌ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಾಗಿತ್ತು?:

ಕಳೆದ ಡಿ.28ರಂದು 2 ಬೈಕ್‌ನಲ್ಲಿ ಬಂದಿದ್ದ 5 ದರೋಡೆಕೋರರ ಗುಂಪು ಹಾಡಹಗಲೇ ಹುಣಸೂರಿನ ಸ್ಕೈ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಎಂಬ ಆಭರಣ ಶೋರೋಂಗೆ ನುಗ್ಗಿತ್ತು. ಈ ವೇಳೆ ಗನ್‌ ಹಿಡಿದು ಅಲ್ಲಿದ್ದ ಸಿಬ್ಬಂದಿ ಮತ್ತು ಗ್ರಾಹಕರನ್ನು ಬೆದರಿಸಿದ್ದ ದರೋಡೆಕೋರರು ಕೇವಲ 4 ನಿಮಿಷಗಳ ಅವಧಿಯಲ್ಲಿ 10 ಕೋಟಿ ರು. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

ಏನೇನು ಕಳವು?:

150 ನೆಕ್ಲೇಸ್‌, 70 ಉಂಗುರ, 64 ಬಳೆ, 65 ಚೈನ್‌, 19 ಕರಿಮಣಿ ಸರ, 13 ವಜ್ರದ ಉಂಗುರ, 17 ಕಿವಿಯೋಲೆ, 12 ಲಾಕೆಟ್‌, 12 ಕಾಲುಚೈನ್‌ 8 ಬ್ರೇಸ್‌ಲೆಟ್‌ ಕಳವಾಗಿದೆ ಎಂದು ಅಂಗಡಿ ಮಾಲೀಕರು ದೂರು ನೀಡಿದ್ದರು. 

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ತಮಿಳುನಾಡಲ್ಲಿ ಯಾರು ಆಗುತ್ತಾರೆ ಕಿಂಗ್‌?
ಕ್ರಿಕೆಟ್‌ಗೆ ಆಹ್ವಾನಿಸದ್ದಕ್ಕೆ ಪಿಚ್ ಧ್ವಂಸಗೊಳಿಸಿದ ಪುರಸಭೆ ಅಧ್ಯಕ್ಷ!