;Resize=(412,232))
ನವದೆಹಲಿ: ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ, ನಾನು ಎರಡು ದಿನ ದೆಹಲಿಯಲ್ಲಿ ಇದ್ದರೆ ಸಾಕು ನನಗೆ ಅಲರ್ಜಿ ಸಮಸ್ಯೆ ಕಾಣಿಸುತ್ತದೆ ಎಂದು ಹೇಳಿದ್ದಾರೆ.
ಇಲ್ಲಿ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಗಡ್ಕರಿ, ‘ದೆಹಲಿಯಲ್ಲಿನ ವಾಯುಮಾಲಿನ್ಯಕ್ಕೆ ವಾಹನಗಳ ಕೊಡುಗೆ ಶೇ.40ರಷ್ಟಿದೆ. ಮಾಲಿನ್ಯಕ್ಕೆ ಕಾರಣವಾಗುವ ಅಂಶಗಳು ಗೊತ್ತಿರುವ ಹೊರತಾಗಿಯೂ ನಾವು ಪ್ರತಿ ವರ್ಷ 22 ಲಕ್ಷ ಕೋಟಿ ರು. ಮೌಲ್ಯದ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜತೆಗೆ, ‘ಇದಕ್ಕೆ ಪರಿಹಾರವಾಗಿ ಪೆಟ್ರೋಲಿಯಂ ಉತ್ಪನ್ನಗಳ ಬದಲು ಹೈಡ್ರೋಜನ್ ಹಾಗೂ ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.