ನಿಮಿಷಾ ಗಲ್ಲು ತಡೆಗೆ ಯೆಮೆನ್ ಆಡಳಿತ, ಇತರ ಆಪ್ತ ದೇಶಗಳಜತೆ ಚರ್ಚೆ : ಕೇಂದ್ರ ಸರ್ಕಾರ

KannadaprabhaNewsNetwork |  
Published : Jul 18, 2025, 12:45 AM ISTUpdated : Jul 18, 2025, 04:37 AM IST
nimisha priya

ಸಾರಾಂಶ

ಯೆಮೆನ್‌ ಪ್ರಜೆಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದು ನೀಡಿ ಆತನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾರನ್ನು ಉಳಿಸಿಕೊಳ್ಳಲು ಯೆಮೆನ್‌ನ ಸ್ಥಳೀಯ ಆಡಳಿತ ಹಾಗೂ ಇತರ ಆಪ್ತ ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ.

 ನವದೆಹಲಿ: ಯೆಮೆನ್‌ ಪ್ರಜೆಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದು ನೀಡಿ ಆತನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾರನ್ನು ಉಳಿಸಿಕೊಳ್ಳಲು ಯೆಮೆನ್‌ನ ಸ್ಥಳೀಯ ಆಡಳಿತ ಹಾಗೂ ಇತರ ಆಪ್ತ ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. 

ಸಾಧ್ಯವಿರುವ ಎಲ್ಲ ಪರಿಹಾರ ಮಾರ್ಗಗಳನ್ನೂ ಹುಡುಕುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ‘ಸರ್ಕಾರ ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ. ನಿಮಿಷಾಳ ಕುಟುಂಬಕ್ಕೆ ವಕೀಲರನ್ನು ನೇಮಿಸಿದ್ದೇವೆ. ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಇತರ ಆಪ್ತ ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ’ ಎಂದು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ- ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ