ನವದೆಹಲಿ: ‘ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದರೂ ಭಾರತದಲ್ಲಿ ಮುಂದಿನ ಕೆಲ ತಿಂಗಳಿಗೆ ಬೇಕಾದಷ್ಟು ಇಂಧನ ಸಂಗ್ರಹ ಇದೆ’ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ಮತ್ತು ಇಂಧನ ಕ್ಷೇತ್ರದಲ್ಲಿ ಸಾರ್ವಜನಿಕ ವಲಯದ ಉದ್ಯಮಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ಬಳಿಕ ಹೇಳಿಕೆ ನೀಡಿರುವ ಪುರಿ, ‘ಭಾರತದ ಇಂಧನ ಕ್ಷೇತ್ರವು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಇಂಧನ ಲಭ್ಯತೆ, ಕೈಗೆಟುಕುವಿಕೆ ಮತ್ತು ಸುಸ್ಥಿರತೆಯನ್ನು ಯಶಸ್ವಿಯಾಗಿ ರೂಪಿಸಿದೆ’ ಎಂದಿದ್ದಾರೆ.