ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ತಾಲೂಕಿನ ಯಕ್ಸಂಬಾ ಪಟ್ಟಣದ ನಣದಿ ಕ್ಯಾಂಪಸ್‌ನಲ್ಲಿ ಜೊಲ್ಲೆ ಗ್ರುಪ್ ಬುಧವಾರ ಆಯೋಜಿಸಿದ ಪ್ರೇರಣಾ ಉತ್ಸವದ ಧಾರ್ಮಿಕ ಚಿಂತನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯವಾಗಿ, ಧಾರ್ಮಿಕವಾಗಿ, ಆರ್ಥಿಕವಾಗಿ ವಿಶ್ವದಲ್ಲಿ ಭಾರತ ಬಲಿಷ್ಠವಾಗುತ್ತಿದೆ. ಭಾರತವನ್ನು ಆಳಿದ ದೇಶಗಳಿಗೆ ತನ್ನ ಪ್ರಗತಿಯ ಮೂಲಕ ಭಾರತ ತಿರುಗುಬಾಣ ಹೂಡುವ ಕಾಲ ದೂರ ಉಳಿದಿಲ್ಲ ಎಂದರು.
ಅಥಣಿ ತಾಲೂಕಿನ ಜನವಾಡದ ಮಲ್ಲಿಕಾರ್ಜುನ ದೇವರು ಸಾನ್ನಿಧ್ಯ ವಹಿಸಿ ಮಾತನಾಡಿ, ಜೊಲ್ಲೆ ಕುಟುಂಬಕ್ಕೆ ಪ್ರೇರಣೆಯಾಗಿರುವ ಜ್ಯೋತಿಪ್ರಸಾದ ಜೊಲ್ಲೆ ಅವರ ಜನ್ಮದಿನವನ್ನು ಪ್ರೇರಣಾ ಉತ್ಸವ ಎಂದು ಆಚರಿಸುವ ಮೂಲಕ ಬುದ್ಧಿಮಾಂಧ್ಯ ಮಕ್ಕಳನ್ನೂ ಕೂಡ ಜೊಲ್ಲೆ ದಂಪತಿ ಎಷ್ಟೊಂದು ಪ್ರೀತಿಸುತ್ತಾರೆ ಎಂಬುವುದಕ್ಕೆ ನಿದರ್ಶನವಾಗಿದೆ ಎಂದು ತಿಳಿಸಿದರು.ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಜೊಲ್ಲೆ ಗ್ರುಪ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆಯನ್ನು ಮಾಡುವುದಕ್ಕೆ ತನ್ನ ಪುತ್ರ ಜ್ಯೋತಿಪ್ರಸಾದ ಪ್ರೇರಣೆಯಾಗಿದ್ದು, ಈ ಕಾರಣದಿಂದಾಗಿಯೇ ಇದೀಗ ತಾನು ವಿಶೇಷ ಓಲಂಪಿಕ್ಸ್ ಇಂಡಿಯಾ ಸಂಸ್ಥೆಯ ಕರ್ನಾಟಕ ರಾಜ್ಯದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿರುವುದು ತೃಪ್ತಿ ತಂದಿದೆ. ವಿಕಲಚೇತನ ಮಕ್ಕಳ ಕುರಿತು ಕಾರ್ಯನಿರ್ವಹಿಸುವ ಜವಾಬ್ದಾರಿಯನ್ನು ರಾಜ್ಯದಲ್ಲಿ ನಿಭಾಯಿಸುವ ಹೊಣೆಗಾರಿಕೆ ತಮ್ಮ ಮೇಲೆ ಇದೆ ಎಂದರು.
ಚಿಕ್ಕೋಡಿಯ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೊಲ್ಲೆ ಗ್ರುಪ್ ಹತ್ತು ಹಲವು ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮೂಲಕ ಸಹಸ್ರಾರು ಮಕ್ಕಳಿಗೆ ಶಿಕ್ಷಣ ಕೊಡುತ್ತಿದ್ದು, ಅಲ್ಲದೇ ಬೀರೇಶ್ವರ ಸಂಸ್ಥೆಯ ಮೂಲಕ ಆರ್ಥಿಕ ಅನುಕೂಲತೆಯನ್ನು ಈ ಭಾಗದ ಜನತೆಗೆ ಮಾಡಿಕೊಡುತ್ತಿದೆ. ಹೀಗಾಗಿ ಅತೀ ಕಡಿಮೆ ಅವಧಿಯಲ್ಲಿ ಬೀರೇಶ್ವರ ಸಂಸ್ಥೆಯು ತನ್ನ ಶಾಖೆಗಳನ್ನು ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೆ ವಿಸ್ತರಣೆ ಮಾಡಿದ್ದು ಪ್ರಗತಿಯ ಸಂಕೇತವಾಗಿದೆ ಎಂದರು.ರಂಗೋಲಿ ಸ್ಪರ್ಧೆ, ಮಗ್ಗಿ ಕಂಠಪಾಠ ಸ್ಪರ್ಧೆ, ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಶೇಷ ಓಲಂಪಿಕ್ ಭಾರತದ ಪ್ರಾದೇಶಿಕ ನಿರ್ದೇಶಕ ಅಮರೇಂದರ್, ಜ್ಯೋತಿಪ್ರಸಾದ ಜೊಲ್ಲೆ, ಪ್ರಿಯಾ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಬೀರೇಶ್ವರ ಸಂಸ್ಥೆಯ ಅಧ್ಯಕ್ಷ ಜಯಾನಂದ ಜಾಧವ ಸೇರಿದಂತೆ ಜೊಲ್ಲೆ ಗ್ರುಪ್‌ನ ವಿವಿಧ ಅಂಗ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಯುವ ನಾಯಕ ಬಸವಪ್ರಸಾದ ಜೊಲ್ಲೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ ಪಾಟೀಲ ನಿರೂಪಿಸಿ ವಂದಿಸಿದರು.