* ವಾರಾಣಸಿಯಲ್ಲಿ ಮೋದಿ ಸೋಲಿಸಲು ‘ಇಂಡಿಯಾ’ ಪ್ಲಾನ್‌!

KannadaprabhaNewsNetwork |  
Published : Dec 21, 2023, 01:15 AM IST
ಮೋದಿ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭಾರಿ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಬಿಜೆಪಿಯ ಹಳೆಯ ಸ್ನೇಹಿತ ಅಥವಾ ಹೊಸ ಮುಖವನ್ನು ಕಣಕ್ಕಿಳಿಸಲು ಕೂಡ ಯೋಜಿಸುತ್ತಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭಾರಿ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಬಿಜೆಪಿಯ ಹಳೆಯ ಸ್ನೇಹಿತ ಅಥವಾ ಹೊಸ ಮುಖವನ್ನು ಕಣಕ್ಕಿಳಿಸಲು ಕೂಡ ಯೋಜಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಇಂಗ್ಲಿಷ್‌ ಟೀವಿ ಚಾನೆಲ್‌ ಒಂದು ವರದಿ ಮಾಡಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಈ ಪ್ರಸ್ತಾವ ಇರಿಸಲಾಗಿದೆ ಎನ್ನಲಾಗಿದೆ. ಈ ಬಾರಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಬಿಜೆಪಿಯ ಮಾಜಿ ಮಿತ್ರರಾದ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅಥವಾ ಹೊಸ ಮುಖವಾದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವ ಪ್ರಸ್ತಾವ ಇರಿಸಲಾಗಿದೆ ಎಂದು ವರದಿ ಹೇಳಿದೆ.

2004ನ್ನು ಹೊರತುಪಡಿಸಿದರೆ 1991ರಿಂದಲೂ ವಾರಾಣಸಿಯಲ್ಲಿ ಬಿಜೆಪಿ ಜಯಗಳಿಸುತ್ತಿದೆ.ನಿತೀಶ್‌ ಕುಮಾರ್ ಅವರು ಈ ಹಿಂದೆ ಬಿಜೆಪಿಯ ಮೈತ್ರಿಕೂಟದಲ್ಲಿದ್ದರು. ಆದರೆ ಇದೀಗ ಮೈತ್ರಿಕೂಟವನ್ನು ತೊರೆದಿದ್ದು, ಪ್ರಧಾನಿ ಹುದ್ದೆಗೇರಲು ಅರ್ಹ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದಾರೆ. ಪ್ರಿಯಾಂಕ ಗಾಂಧಿ ಈವರೆಗೂ ಒಂದೂ ಚುನಾವಣೆಯನ್ನೂ ಎದುರಿಸಿಲ್ಲ. 2019ರಲ್ಲೇ ಇವರು ವಾರಾಣಸಿಯಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮೋದಿ ವಿರುದ್ಧ ಸ್ಪರ್ಧೆಯ ಪ್ರಶ್ನೆ ಬಂದಾಗೆಲ್ಲಾ ಪ್ರಿಯಾಂಕ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ. ಹೀಗಾಗಿ ಮೋದಿ ಅವರನ್ನು ಸೋಲಿಸಲು ಈ ಇಬ್ಬರು ನಾಯಕರಲ್ಲಿ ಒಬ್ಬರನ್ನು ಕಣಕ್ಕಿಳಿಸಲಾಗುತ್ತದೆ ಎನ್ನಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಆಪರೇಷನ್‌ ಸಿಂದೂರ 1ನೇ ದಿನವೇ ಭಾರತ ಸೋತಿತು: ಚವಾಣ್‌
ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌