2026ರ ವೇಳೆಗೆ ರಷ್ಯಾದಿಂದ ಬಾಕಿ 2 ಎಸ್-400 ಕ್ಷಿಪಣಿ ವ್ಯವಸ್ಥೆ ಪೂರೈಕೆ

KannadaprabhaNewsNetwork |  
Published : Jun 03, 2025, 01:07 AM ISTUpdated : Jun 03, 2025, 04:18 AM IST
ಎಸ್‌-400  | Kannada Prabha

ಸಾರಾಂಶ

2025-2026ರ ವೇಳೆಗೆ ಎಸ್-400 ವಾಯುರಕ್ಷಣಾ ವ್ಯವಸ್ಥೆಯ ಉಳಿದ ಘಟಕಗಳನ್ನು ಭಾರತಕ್ಕೆ ತಲುಪಿಸಲು ರಷ್ಯಾ ಬದ್ಧವಾಗಿದೆ ಎಂದು ಭಾರತದಲ್ಲಿನ ರಷ್ಯಾದ ಉಪರಾಯಭಾರಿ ರೋಮನ್ ಬಾಬುಷ್ಕಿನ್ ಹೇಳಿದ್ದಾರೆ.

ನವದೆಹಲಿ: 2025-2026ರ ವೇಳೆಗೆ ಎಸ್-400 ವಾಯುರಕ್ಷಣಾ ವ್ಯವಸ್ಥೆಯ ಉಳಿದ ಘಟಕಗಳನ್ನು ಭಾರತಕ್ಕೆ ತಲುಪಿಸಲು ರಷ್ಯಾ ಬದ್ಧವಾಗಿದೆ ಎಂದು ಭಾರತದಲ್ಲಿನ ರಷ್ಯಾದ ಉಪರಾಯಭಾರಿ ರೋಮನ್ ಬಾಬುಷ್ಕಿನ್ ಹೇಳಿದ್ದಾರೆ. 

‘ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ವೇಳೆ ಎಸ್‌-400 ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಕೇಳಿದ್ದೇವೆ. ರಷ್ಯಾ ಮತ್ತು ಭಾರತ ಸಹಭಾಗಿತ್ವದ ಸುದೀರ್ಘ ಇತಿಹಾಸವನ್ನು ಹೊಂದಿವೆ. ಒಪ್ಪಂದದಂತೆ, ಉಳಿದ 2 ಎಸ್‌-400 ಘಟಕಗಳನ್ನು 2025-26ರ ವೇಳೆಗೆ ಭಾರತಕ್ಕೆ ತಲುಪಿಸಲಾಗುವುದು’ ಎಂದರು.

ಭಾರತ-ರಷ್ಯಾ ನಡುವೆ 5 ಎಸ್-400 ವ್ಯವಸ್ಥೆಗಳ ಖರೀದಿಗೆ ಒಪ್ಪಂದವಾಗಿತ್ತು. ಈ ಪೈಕಿ ಮೂರನ್ನು ಈಗಾಗಲೇ ರಷ್ಯಾ ಹಸ್ತಾಂತರಿಸಿದೆ.ಆಪರೇಷನ್ ಸಿಂದೂರದ ವೇಳೆ ಸುದರ್ಶನ ಚಕ್ರವೆಂದೇ ಖ್ಯಾತವಾಗಿರುವ ರಷ್ಯಾನಿರ್ಮಿತ ಎಸ್‌-400 ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಡ್ರಗ್ಸ್‌ ನೀಡಿ 50 ಮಹಿಳೆಯರ ರೇಪ್‌ ಮಾಡಿದ್ದ ಜ್ಯೋತಿಷಿ ಸೆರೆ!
ಸಮರ ಬಿಸಿ: ಪ್ರೀಮಿಯಂ ಪೆಟ್ರೋಲ್‌ ₹2.35 ಏರಿಕೆ