ಮೌಲ್ಯ ಮಾಪನದಲ್ಲಿ ಫೇಲ್‌ : ಮೈಸೂರು ಕ್ಯಾಂಪಸ್‌ನ 300 ಉದ್ಯೋಗಿಗಳಿಗೆ ಇನ್ಫಿ ಕೊಕ್

KannadaprabhaNewsNetwork |  
Published : Feb 08, 2025, 12:30 AM ISTUpdated : Feb 08, 2025, 07:55 AM IST
ಇನ್ಫಿ | Kannada Prabha

ಸಾರಾಂಶ

ಐಟಿ ಕ್ಷೇತ್ರದ ದೈತ್ಯ ಕಂಪನಿ ಇನ್ಫೋಸಿಸ್‌ ತನ್ನ ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿ ನಂತರವೂ ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕೆ ಹೊಸದಾಗಿ ನೇಮಕಗೊಂಡ 300 ಉದ್ಯೋಗಿಗಳನ್ನು ತೆಗೆದು ಹಾಕಿದೆ.

ವದೆಹಲಿ: ಐಟಿ ಕ್ಷೇತ್ರದ ದೈತ್ಯ ಕಂಪನಿ ಇನ್ಫೋಸಿಸ್‌ ತನ್ನ ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿ ನಂತರವೂ ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕೆ ಹೊಸದಾಗಿ ನೇಮಕಗೊಂಡ 300 ಉದ್ಯೋಗಿಗಳನ್ನು ತೆಗೆದು ಹಾಕಿದೆ. 

ಈ ಬಗ್ಗೆ ಇನ್ಫೋಸಿಸ್‌ ಪ್ರತಿಕ್ರಿಯಿಸಿದ್ದು, ‘ನಾವು ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಹೊಸದಾಗಿ ನೇಮಕಗೊಂಡವರು ನಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿಯನ್ನು ಪಡೆದ ಬಳಿಕವೂ ಮೂರು ಅವಕಾಶ ನೀಡಿದರೂ ಆಂತರಿಕ ಮೌಲ್ಯ ಮಾಪನವನ್ನು ಪೂರ್ಣಗೊಳಿಸಲು ವಿಫಲರಾಗಿದ್ದಾರೆ. ಹೀಗಾಗಿ ಅವರು ಸಂಸ್ಥೆಯೊಂದಿಗೆ ಮುಂದುವರೆಯಲು ಸಾಧ್ಯವಿಲ್ಲ. ಈ ಷರತ್ತನ್ನು ಅವರ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ’ ಎಂದಿದೆ. 

ಇನ್ನು ಇನ್ಫೋಸಿಸ್‌ ಸಂಸ್ಥೆಯ ಈ ದಿಢೀರ್‌ ನಿರ್ಧಾರಕ್ಕೆ ಐಟಿ ಉದ್ಯೋಗಿಗಳ ಸಂಘ ಎನ್‌ಐಟಿಇಎಸ್‌ ಆಕ್ರೋಶ ವ್ಯಕ್ತ ಪಡಿಸಿದ್ದು, ಹೊಸ ಉದ್ಯೋಗಳು ಇದರಿಂದ ಹೆಚ್ಚು ಬಾಧಿತರಾಗುತ್ತಿದ್ದಾರೆ. ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಿ ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ನೀಡುವುದಾಗಿ ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ