ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಭಾನುವಾರ ಛತ್ತೀಸ್‌ಗಢದ ಮಹಾದೇವ್ ಬುಕ್ ಸೇರ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ಹೊರಡಿಸಿದೆ. ಅಕ್ರಮ ಬೆಟ್ಟಿಂಗ್ ಆಪ್ ಸಿಂಡಿಕೇಟ್ ವಿರುದ್ಧ ಇ.ಡಿ. ನಡೆಸಿದ ತನಿಖೆ ಆಧರಿಸಿ ಈ ಕ್ರಮ ಜರುಗಿಸಲಾಗಿದೆ ಎಂದು ಕೇಂದ್ರ ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.