ಅ.15 ಮತ್ತು 16 ರಂದು ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ ಸಮಾವೇಶ : ಜೈಶಂಕರ್‌ಗೆ ಪಾಕಿಸ್ತಾನಕ್ಕೆ

KannadaprabhaNewsNetwork |  
Published : Oct 05, 2024, 01:31 AM ISTUpdated : Oct 05, 2024, 05:35 AM IST
S Jaishankar

ಸಾರಾಂಶ

ಅ.15 ಮತ್ತು 16 ರಂದು ಪಾಕಿಸ್ತಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ)ಯ ಸಮಾವೇಶದಲ್ಲಿ ಭಾರತದ ಪರವಾಗಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಭಾಗಿಯಾಗಲಿದ್ದಾರೆ.

ನವದೆಹಲಿ: ಅ.15 ಮತ್ತು 16 ರಂದು ಪಾಕಿಸ್ತಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ)ಯ ಸಮಾವೇಶದಲ್ಲಿ ಭಾರತದ ಪರವಾಗಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಭಾಗಿಯಾಗಲಿದ್ದಾರೆ. ಇದು 9 ವರ್ಷದ ಬಳಿಕ ಭಾರತದ ಸಚಿವರೊಬ್ಬರ ಪಾಕಿಸ್ತಾನ ಭೇಟಿಯಾಗಲಿದೆ. 2015ರಲ್ಲಿ ಅಂದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌, ಈ ಬಾರಿ ಪಾಕಿಸ್ತಾನವು ಎಸ್‌ಸಿಒ ಸಮಾವೇಶವನ್ನು ಆಯೋಜಿಸುತ್ತಿದೆ. ಈ ಸಮಾವೇಶದಲ್ಲಿ ಅ.15 ಮತ್ತು 16 ರಂದು ನಡೆಯಲಿದ್ದು, ವಿದೇಶಾಂಗ ಸಚಿವ ಜೈಶಂಕರ್‌ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್‌ಸಿಒ ಸಭೆಯಲ್ಲಿ ಆಯಾ ದೇಶದ ಅಧ್ಯಕ್ಷರು ಇಲ್ಲವೇ ಪ್ರಧಾನಿ ಭಾಗಿಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳೆದ ಆಗಸ್ಟ್‌ನಲ್ಲಿ ಪಾಕಿಸ್ತಾನ ಆಹ್ವಾನಿಸಿತ್ತು. ಆದರೆ ಉಭಯ ದೇಶಗಳ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮೋದಿ ಬದಲಿಗೆ ಜೈಶಂಕರ್‌ ತೆರಳುತ್ತಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!