ಅಯೋಧ್ಯೆ ರಾಮಮಂದಿರಕ್ಕೆ ಜೈಷ್‌ ಬೆದರಿಕೆ

KannadaprabhaNewsNetwork |  
Published : Jan 21, 2024, 01:34 AM ISTUpdated : Jan 21, 2024, 08:24 AM IST
Jaish al-Adl

ಸಾರಾಂಶ

ಸಾವಿರಾರು ಮುಸ್ಲಿಮರನ್ನು ಕೊಂದುದಕ್ಕೆ ಪ್ರತೀಕಾರವಾಗಿ ಅಯೋಧ್ಯೆ ರಾಮಮಂದಿರಕ್ಕೆ ದಾಳಿ ಮಾಡಿ ಹಿಂದೂಗಳ ಮೇಲೆ ಸೇಡು ತೀರಿಸಿಕೊಳ್ತೇವೆ ಎಂದು ಜೈಷ್‌ ಬೆದರಿಕೆ ಹಾಕಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಅಯೋಧ್ಯೆ: ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೇವಲ ಎರಡು ದಿನ ಬಾಕಿ ಉಳಿದಿರುವ ನಡುವೆಯೇ ಸಾವಿರಾರು ಮುಗ್ಧ ಮುಸ್ಲಿಮರನ್ನು ಕೊಲ್ಲುವ ಮೂಲಕ ಕಟ್ಟಲಾದ ರಾಮಮಂದಿರದ ಮೇಲೆ ದಾಳಿ ಮಾಡುವ ಮೂಲಕ ಸೇಡು ತೀರಿಸಿಕೊಳ್ಳುವುದಾಗಿ ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆ ಬೆದರಿಕೆ ಸಂದೇಶ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಶುಕ್ರವಾರ ರಾತ್ರಿ ರವಾನೆಯಾದ ಸಂದೇಶದಲ್ಲಿ, ‘ರಾಮಮಂದಿರ ಕಟ್ಟುವ ಉದ್ದೇಶದಿಂದ ಅಮಾಯಕ ಮುಸಲ್ಮಾನರನ್ನು ಕೊಂದು ಕ್ರೌರ್ಯ ಮೆರೆಯಲಾಗಿದೆ. 

ಈ ಹಿನ್ನೆಲೆಯಲ್ಲಿ ಜೋರ್ಡಾನ್‌ನಲ್ಲಿರುವ ಆಲ್‌ ಅಕ್ಸಾ ಮಸೀದಿಯಲ್ಲಿ ಉಂಟಾದ ಕೋಮು ಸಂಘರ್ಷದ ರೀತಿಯಲ್ಲೇ ರಾಮಮಂದಿರದ ಮೇಲೆ ದಾಳಿ ನಡೆಸಿ ಹಿಂದೂಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇವೆ’ ಎಂದು ಉಲ್ಲೇಖಿಸಲಾಗಿದೆ. 

ಅರ್ಥಹೀನ ಸಂದೇಶ- ಗುಪ್ತಚರ ಮೂಲಗಳು: ಆದರೆ ಇದೊಂದು ಅರ್ಥಹೀನ ಸಂದೇಶ. ಜೈಷ್‌ ಎ ಮೊಹಮ್ಮದ್‌ ಬೆದರಿಕೆಯಲ್ಲಿ ಯಾವುದೇ ಹುರುಳಿಲ್ಲ. ಜೈಷ್‌ ಎ ಮೊಹಮ್ಮದ್‌ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕೈಗೊಂಬೆಯಾಗಿ ಈ ರೀತಿಯ ಸಂದೇಶ ಕಳುಹಿಸುತ್ತಿದೆ’ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಕಟ್ಟೆಚ್ಚರ:ಆದಾಗ್ಯೂ ಅಯೋಧ್ಯೆಯಲ್ಲಿ ಭಾರೀ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ನಗರಾದ್ಯಂತ ಎಲ್ಲ ಚಟುವಟಿಕೆಗಳ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಇದರ ಜೊತೆಗೆ ಗಣರಾಜ್ಯೋತ್ಸವದ ನಿಮಿತ್ತ ಭಾರತದ ಉದ್ದಗಲಕ್ಕೂ ಈಗಾಗಲೇ ಭಾರೀ ಕಟ್ಟಚ್ಚರ ವಹಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗೊಗೋಯ್‌ ಪಾಕ್‌ ನಂಟಿನ ಬಗ್ಗೆ ಕೇಂದ್ರೀಯ ತನಿಖೆಗೆ ಶಿಫಾರಸು
ಅಮೆರಿಕ ಡೀಲ್‌ ವಿರುದ್ಧ ಫೆ.12ಕ್ಕೆ ದೇಶವ್ಯಾಪಿ ರೈತ ಪ್ರತಿಭಟನೆ