ಕನ್ನಡ ಕೇವಲ ಸಂವಹನದ ಭಾಷೆಯಲ್ಲ, ಕನ್ನಡಿಗರ ಅಸ್ಮಿತೆ: ಆನಂದ್ ಕುಮಾರ್

KannadaprabhaNewsNetwork |  
Published : Nov 02, 2026, 02:15 AM IST
೧ಶಿರಾ೧: ಶಿರಾ ಶ್ರೀ ವಿವೇಕಾನಂದ ಕ್ರೀಡಾಂಗಣದ ಆವರಣದಲ್ಲಿ ನಡೆದ ೭೧ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ತಹಶೀಲ್ದಾರ್ ಆನಂದ್ ಕುಮಾರ್ ನೆರವೇರಿಸಿದರು.  | Kannada Prabha

ಸಾರಾಂಶ

ಕನ್ನಡ ಕೇವಲ ಸಂವಹನದ ಭಾಷೆಯಲ್ಲ. ಅದು ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದು ಪ್ರತಿಯೊಬ್ಬ ಕನ್ನಡಿಗನ ಆಶಯವಾಗಬೇಕು

ಕನ್ನಡಪ್ರಭ ವಾರ್ತೆ ಶಿರಾ

ಕನ್ನಡ ಕೇವಲ ಸಂವಹನದ ಭಾಷೆಯಲ್ಲ. ಅದು ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದು ಪ್ರತಿಯೊಬ್ಬ ಕನ್ನಡಿಗನ ಆಶಯವಾಗಬೇಕು ಎಂದು ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಆನಂದ್ ಕುಮಾರ್ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದಿಂದ ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದ ಆವರಣದಲ್ಲಿ ಏರ್ಪಡಿಸಿದ್ದ ೭೧ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ದೊರೆಯಬೇಕು. ಆಡಳಿತ, ಶಿಕ್ಷಣ, ಉದ್ಯೋಗ ಹಾಗೂ ಸಾರ್ವಜನಿಕ ವ್ಯವಹಾರಗಳಲ್ಲಿ ಉತ್ತೇಜನಗೊಳ್ಳಬೇಕು. ಕನ್ನಡವೇ ಆಡಳಿತದ ಭಾಷೆಯಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆ ಗಟ್ಟಿಯಾಗಲು ಎಲ್ಲರೂ ಕನ್ನಡತನ ಬೆಳೆಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಓದು, ಕನ್ನಡದಲ್ಲಿ ಶಿಕ್ಷಣ ನೀಡಬೇಕು. ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯ ಕನ್ನಡ ಬಳಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಕುಮಾರ್ ಮಾತನಾಡಿ, ಜಗತ್ತಿನ ೧೦ ಶ್ರೇಷ್ಠ ಭಾಷೆಗಳಲ್ಲಿ ಕನ್ನಡವೂ ಒಂದಾಗಿದೆ. ಲಿಪಿಗಳ ರಾಣಿ ಕನ್ನಡ. ಇಂತಹ ಶ್ರೇಷ್ಠ, ಸುಂದರ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ತಾಲೂಕು ಆಡಳಿತದಿಂದ ಸುಮಾರು ೨೮ ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮೂದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಡಿವೈಎಸ್‌ಪಿ ಬಿ.ಕೆ.ಶೇಖರ್, ತಾಲೂಕು ಕಸಾಪ ಅಧ್ಯಕ್ಷರಾದ ಬಿ.ಪಿ.ಪಾಂಡುರಂಗಯ್ಯ, ಮಾಜಿ ಅಧ್ಯಕ್ಷ ಡಾ.ಬಿ.ಗೋವಿಂದಪ್ಪ, ಕಸಬಾ ಕಸಾಪ ಅಧ್ಯಕ್ಷೆ ರೇಣುಕಮ್ಮ, ಪೌರಾಯುಕ್ತ ರುದ್ರೇಶ್, ತಾ.ಪಂ. ಇಓ ಹರೀಶ್, ಬಿ.ಆರ್.ಸಿ. ರಂಗಪ್ಪ.ಎಚ್, ಸಹಾಯಕ ಕೃಷಿ ನಿರ್ದೇಶಕ ಎಚ್. ನಾಗರಾಜು, ಸಿಡಿಪಿಒ ಹರಿಪ್ರಸಾದ್, ಕಸಬಾ ಕಂದಾಯ ಅಧಿಕಾರಿ ಕಾಂತರಾಜು, ಸೇರಿದಂತೆ ಹಲವರು ಹಾಜರಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಸಿಗಬೇಕು
ಜಗನ್‌ ಹಟಕ್ಕೆ ಮಣಿದ ಶರ್ಮಿಳಾ - ಯಲಹಂಕ ಪ್ಯಾಲೇಸ್‌ನಲ್ಲಿ ಇಲ್ಲ ವೈಎಸ್ಸಾರ್‌ ಮೊಮ್ಮಗಳ ಮದುವೆ