ಏನಿದು ಹೆದ್ದಾರಿ ಬ್ಲಾಕ್ ಸ್ಪಾಟ್?
--
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿಹೆಚ್ಚು ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್‌ಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.ಈ ಕುರಿತು ಗುರುವಾರ ಲೋಕಸಭೆಗೆ ಮಾಹಿತಿ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದೇಶದ ವಿವಿಧ ರಾಜ್ಯಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಟ್ಟು 5803 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ ತಮಿಳುನಾಡು (784), ಪಶ್ಚಿಮ ಬಂಗಾಳ (701) ಮೊದಲ ಎರಡು ಸ್ಥಾನದಲ್ಲಿವೆ ಎಂದು ಹೇಳಿದ್ದಾರೆ. ಮೂರನೇ ಸ್ಥಾನದಲ್ಲಿ ಕರ್ನಾಟಕ ಇದೆ ಎಂದು ಮಾಹಿತಿ ನೀಡಿದ್ದರೂ, ಕರ್ನಾಟಕದ ಬ್ಲಾಕ್ ಸ್ಪಾಟ್‌ಗಳ ಸಂಖ್ಯೆಯನ್ನು ನೀಡಿಲ್ಲ.