ವೈದ್ಯಕೀಯ ಪರೀಕ್ಷೆ ಇದೆ, 1 ವಾರ ಬೇಲ್‌ ವಿಸ್ತರಿಸಿ: ಸುಪ್ರೀಂಗೆ ಕೇಜ್ರಿ ಮನವಿ

KannadaprabhaNewsNetwork |  
Published : May 28, 2024, 01:07 AM ISTUpdated : May 28, 2024, 05:06 AM IST
Aravind Kejriwal

ಸಾರಾಂಶ

ತಮಗೆ ಆರೋಗ್ಯ ಸಂಬಂಧಿ ಪರೀಕ್ಷೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಒಂದು ವಾರ ಜಾಮೀನು ಅವಧಿ ವಿಸ್ತರಿಸುವಂತೆ ನ್ಯಾಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮನವಿ ಮಾಡಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿರುವ ಜಾಮೀನನ್ನು ಮತ್ತೆ ಏಳು ದಿನಗಳ ಅವಧಿಗೆ ವಿಸ್ತರಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ದಿಢೀರ್ ದೇಹದ ತೂಕ ನಷ್ಟವಾಗುತ್ತಿದೆ. ಹೆಚ್ಚಿನ ಕಿಟೋನ್ ಮಟ್ಟದ ಸಮಸ್ಯೆಯಿಂದ ಬಳಲುತ್ತಿದ್ದು ಪಿಇಟಿ-ಸಿಟಿ ಸ್ಕ್ಯಾನ್ ಒಳಗಾಗಲು ಜಾಮೀನು ಅವಧಿಯನ್ನು ವಾರದ ತನಕ ಮುಂದೂಡಿ ಎಂದು ನ್ಯಾಯಾಲಯಕ್ಕೆ ದೆಹಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮೇ.26ರಂದು ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಅರವಿಂದ್ ಕೇಜ್ರಿವಾಲ್ ಜೂ.9ಕ್ಕೆ ಶರಣಾಗುವುದಾಗಿ ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೈಸೂರು ಸ್ಯಾಂಡಲ್ ಸೋಪು ಉತ್ಪನ್ನ : ದಾಖಲೆ ಬರೆದ ಕೆಎಸ್‌ಡಿಎಲ್‌
ಮೇಘಾಲಯ ಮೇಲಿಲ್ಲ ಬಾಂಗ್ಲಾ ಸಂಘರ್ಷ ಪರಿಣಾಮ : ವಿಜಯ್‌