ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್ ದಾಬಸ್‌ಪೇಟೆಗೆ ವರ್ಗ

Published : Jul 06, 2024, 11:06 AM IST
Security guard Kulwinder Kaur reveals why she killed Kangana Ranaut bsm

ಸಾರಾಂಶ

ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿ ಅಮಾನತುಗೊಂಡಿದ್ದ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ದಾಬಸ್‌ಪೇಟೆ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿ ಅಮಾನತುಗೊಂಡಿದ್ದ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. 

ಅವರ ವಿರುದ್ಧ ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿದ್ದು, ಕುಲ್ವಿಂದರ್‌ರನ್ನು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪವಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಜೂ.7 ರಂದು ಕಂಗನಾ, ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಹೊರಟಿದ್ದಾಗ, ರೈತರ ಆಂದೋಲನಕ್ಕೆ ಸಂಬಂಧಿಸಿ ಕಂಗನಾ ನೀಡಿದ್ದ ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ಹೇಳಿ ಕುಲ್ವಿಂದರ್‌ ಕಪಾಳಮೋಕ್ಷ ಮಾಡಿದ್ದರು.

. ಈ ವೇಳೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕುಲ್ವಿಂದರ್ ಅವರು ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ಬಳಿಕ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ರೈತರ ಆಂದೋಲನಕ್ಕೆ ಸಂಬಂಧಿಸಿ ಕಂಗನಾ ನೀಡಿದ್ದ ಹೇಳಿಕೆಯಿಂದ ತಮಗೆ ನೋವಾಗಿತ್ತು. ಹೀಗಾಗಿ ಕಂಗನಾಗೆ ಕಪಾಳಮೋಕ್ಷ ಮಾಡಿದ್ದೆ ಎಂದು ಕುಲ್ವಿಂದರ್‌ ಹೇಳಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಕುಲ್ವಿಂದರ್ ಕೌರ್ ಮೇಲೆ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ತಿಳಿಸಿದೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ