ಕಲ್ಲಿಕೋಟೆ: ಪ್ರಧಾನಿ ನರೇಂದ್ರ ಮೋದಿ, ಕೆಲವು ಶ್ರೀಮಂತ ವ್ಯಕ್ತಿಗಳ ದಾಳ ಎಂದು ಕಾಂಗ್ರೆಸ್ ನಾಯಕ ಹಾಗೂ ವಯನಾಡು ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ದೂರಿದರು.
ಮೋದಿ ದೇಶದ 20 ರಿಂದ 25 ಶ್ರೀಮಂತ ಉದ್ಯಮಿದಾರರಿಗೆ 16 ಲಕ್ಷ ಕೋಟಿ ರು. ನೀಡಿದ್ದಾರೆ. ಆದರೆ ಬಡವರ ಸಮಸ್ಯೆ, ರೈತರ ಸಮಸ್ಯೆ, ನಿರುದ್ಯೋಗಿಗಳ ಸಮಸ್ಯೆ ಕುರಿತು ಅವರು ಎಂದೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದ ಅವರು, ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.