ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ತಿಂಗಳಿಗೆ ₹3000 ಮಹಾರಾಷ್ಟ್ರದಲ್ಲೂ ಕಾಂಗ್ರೆಸ್‌ ಗ್ಯಾರಂಟಿ

KannadaprabhaNewsNetwork |  
Published : Nov 06, 2024, 11:54 PM IST
ರಾಹುಲ್‌ | Kannada Prabha

ಸಾರಾಂಶ

ನ.20ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್‌ ಪಕ್ಷ ಬುಧವಾರ ಕರ್ನಾಟಕ ಮಾದರಿಯಲ್ಲೇ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ.

ಮುಂಬೈ: ನ.20ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್‌ ಪಕ್ಷ ಬುಧವಾರ ಕರ್ನಾಟಕ ಮಾದರಿಯಲ್ಲೇ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ.

ಮುಂಬೈನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಘೋಷಣೆಗಳನ್ನು ಮಾಡಿದರು. ಇವುಗಳಲ್ಲಿ ಕರ್ನಾಟಕದ ರೀತಿಯಲ್ಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಮಾಸಿಕ 3000 ರು. ಸಹಾಯಧನ ಸೇರಿವೆ.

----

5 ಗ್ಯಾರಂಟಿಗಳು

- ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್‌ ಪ್ರಯಾಣ

- ರಾಜ್ಯದ ಎಲ್ಲ ಮಹಿಳೆಯರಿಗೆ ಮಾಸಿಕ 3000 ರು. ನೆರವು

- ₹3 ಲಕ್ಷದವರೆಗೆ ರೈತರ ಸಾಲ ಮನ್ನಾ. ಸಾಲ ಕಟ್ಟಿದರೆ 50,000 ರು. ಪ್ರೋತ್ಸಾಹಧನ

-ಎಲ್ಲರಿಗೂ 25 ಲಕ್ಷ ರು.ವರೆಗೆ ಆರೋಗ್ಯ ವಿಮೆ ಹಾಗೂ ಉಚಿತ ಔಷಧಿ ವಿತರಣೆ

- ನಿರುದ್ಯೋಗಿಗಳಿಗೆ ಸರ್ಕಾರದಿಂದ ಮಾಸಿಕ 4000 ರು. ನೆರವು

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ