ಮಣಿಪುರ ವಿಧಾನಸಭಾ ಕಟ್ಟಡದ ಬಳಿ ಬೆಂಕಿ: ಉಗ್ರರ ಕೃತ್ಯದ ಶಂಕೆ

KannadaprabhaNewsNetwork |  
Published : Jun 16, 2024, 01:52 AM ISTUpdated : Jun 16, 2024, 04:08 AM IST
ಮಣಿಪುರ | Kannada Prabha

ಸಾರಾಂಶ

ಮಣಿಪುರ ರಾಜಧಾನಿ ಇಂಫಾಲದಲ್ಲಿರುವ ವಿಧಾನಸಭಾ ಕಟ್ಟಡದ ಪಕ್ಕದಲ್ಲೇ ಇರುವ ಕಟ್ಟಡವೊಂದರಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿದೆ.

ಇಂಫಾಲ್‌: ಮಣಿಪುರ ರಾಜಧಾನಿ ಇಂಫಾಲದಲ್ಲಿರುವ ವಿಧಾನಸಭಾ ಕಟ್ಟಡದ ಪಕ್ಕದಲ್ಲೇ ಇರುವ ಕಟ್ಟಡವೊಂದರಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿದೆ. ಮುಖ್ಯಮಂತ್ರಿ ಮನೆಯ ಸಮೀಪದಲ್ಲೇ ಈ ಅವಘಢ ಸಂಭವಿಸಿದೆ. ಈ ಘಟನೆಯಲ್ಲಿ ಉಗ್ರರ ಕೈವಾಡವನ್ನು ಶಂಕಿಸಲಾಗಿದೆ.

3-4 ದಿನಗಳ ಹಿಂದಷ್ಟೇ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತೆರಳುವ ವೇಳೆ ಉಗ್ರರ ಗುಂಪು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿತ್ತು. ಇದರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಈ ಕಳವಳಕಾರಿ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಘಟನೆಯಲ್ಲಿ ಮುಖ್ಯಮಂತ್ರಿ ಮನೆ ಅಥವಾ ವಿಧಾನಸಭಾ ಕಟ್ಟಡಕ್ಕೆ ಯಾವುದೇ ಹಾನಿ ಆಗಿಲ್ಲ.

ಮಣಿಪುರ ಸಚಿವಾಲಯವು ಪ್ರತ್ಯೇಕ ಆಡಳಿತಕ್ಕೆ ಆಗ್ರಹಿಸುತ್ತಿರುವ ಕುಕಿ ಇಂಪಿ ಸಂಘಟನೆಯ ಆಡಳಿತ ಕಚೇರಿ ಹತ್ತಿರದಲ್ಲೇ ಇರುವ ಕಾರಣ, ಅವರೇ ದಾಳಿ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ 219 ಜನರು ಸಾವನ್ನಪ್ಪಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌ : ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ