ರೈತರಿಗೆ ಮೋದಿ ಸರ್ಕಾರ ಶಾಪವಿದ್ದಂತೆ: ಖರ್ಗೆ ಕಿಡಿ

KannadaprabhaNewsNetwork |  
Published : Feb 18, 2024, 01:30 AM ISTUpdated : Feb 18, 2024, 03:12 PM IST
ಖರ್ಗೆ | Kannada Prabha

ಸಾರಾಂಶ

750 ರೈತರಿಗೆ ಸಾವಿಗೆ ಮೋದಿ ಸರ್ಕಾರವೇ ಕಾರಣವೆಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ನವದೆಹಲಿ: ರಾಷ್ಟ್ರದ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸದೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ಅಂಟಿದ ಶಾಪವಾಗಿ ಹೊರಹೊಮ್ಮಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಖರ್ಗೆ, ‘ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಇದುವರೆಗೂ ಸುಮಾರು 750 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಲ್ಲದೆ ಪ್ರತಿಭಟನೆ ನಡೆಯುವ ಮಧ್ಯೆಯೇ ಮತ್ತೊಬ್ಬ ರೈತ ಪ್ರಾಣತ್ಯಾಗ ಮಾಡಿದರೂ ಸೂಕ್ತ ಬೆಂಬಲ ಬೆಲೆ ಖಾತರಿ ನೀಡದ ಮೋದಿ ಸರ್ಕಾರ ರೈತ ಸಮುದಾಯಕ್ಕೆ ಶಾಪವಾಗಿ ಪರಿಣಮಿಸಿದೆ’ ಎಂದು ಟೀಕಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬೆಂಗಳೂರು ಯುವತಿ ಜತೆ ಮದುವೆಯಾದ ಮಹಾಕುಂಭ ಖ್ಯಾತಿಯ ‘ಐಐಟಿ ಬಾಬಾ’
ಕೋಮಾದಲ್ಲಿ ಮೊಜ್ತಬಾ, ಕೋಂ ನಗರದಲ್ಲಿ ಚಿಕಿತ್ಸೆ