ಮನೆಯಲ್ಲಿ ಬಿದ್ದು ಮಮತಾ ಹಣೆಗೆ ಗಾಯ: ಆಸ್ಪತ್ರೆಗೆ ದಾಖಲು

KannadaprabhaNewsNetwork |  
Published : Mar 15, 2024, 01:16 AM ISTUpdated : Mar 15, 2024, 07:44 AM IST
ಮಮತಾ ಬ್ಯಾನರ್ಜಿ | Kannada Prabha

ಸಾರಾಂಶ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ವರಿಷ್ಠೆ ಮಮತಾ ಬ್ಯಾನರ್ಜಿ ಮನೆಯಲ್ಲಿ ನಡೆದಾಡುವಾಗ ಜಾರಿ ಬಿದ್ದಿದ್ದು, ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ವರಿಷ್ಠೆ ಮಮತಾ ಬ್ಯಾನರ್ಜಿ ಮನೆಯಲ್ಲಿ ನಡೆದಾಡುವಾಗ ಜಾರಿ ಬಿದ್ದಿದ್ದು, ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಅವರ ತಲೆಯಿಂದ ರಕ್ತಸ್ರಾವವಾಗುತ್ತಿರುವ ದೃಶ್ಯವನ್ನು ತೃಣಮೂಲ ಕಾಂಗ್ರೆಸ್‌ ಪಕ್ಷ ಟ್ವೀಟ್‌ ಮಾಡಿದೆ.

ಆಕೆಯನ್ನು ನಗರದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆಕೆ ತಮ್ಮ ಮನೆಯಲ್ಲಿ ನಡೆದು ಹೋಗುವಾಗ ಆಯತಪ್ಪಿ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ. ಬಳಿಕ ಅವರನ್ನು ಮನೆಯಲ್ಲಿದ್ದ ಬಂಧುಗಳು ಆಸ್ಪತ್ರೆಗೆ ಸೇರಿಸಿದರು ಎಂದು ತಿಳಿದು ಬಂದಿದೆ.

ಇದಕ್ಕೂ ಮೊದಲು ಅವರು ಜ.24ರಂದು ರಸ್ತೆಯಲ್ಲಿ ಬರುವಾಗ ಅಪಘಾತವಾಗಿ ತಲೆಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದರು.

PREV

Recommended Stories

ಕೃಷಿ ತ್ಯಾಜ್ಯ ಸುಡುವ ರೈತರನ್ನುಬಂಧಿಸಿ ಪಾಠ ಕಲಿಸಿ: ಸುಪ್ರೀಂ
ಸಂಸತ್‌, ತಾಜ್‌ ದಾಳಿ ಹಿಂದೆ ಅಜರ್‌: ಜೈಷ್‌ ಕಮಾಂಡರ್‌