18 ಎಕರೆ ಆಸ್ತಿಗಾಗಿ ಮದುವೆಯಾಗಿ ಪತಿ ಹತ್ಯೆ!

KannadaprabhaNewsNetwork |  
Published : Jun 30, 2025, 12:34 AM ISTUpdated : Jun 30, 2025, 06:23 AM IST
ಕೊಲೆ | Kannada Prabha

ಸಾರಾಂಶ

ಮಹಿಳೆಯೊಬ್ಬಳು 18 ಎಕರೆ ಆಸ್ತಿಗಾಗಿ 45 ವರ್ಷದ ವ್ಯಕ್ತಿಯೊಬ್ಬನನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಆತನನ್ನು ಹತ್ಯೆ ಮಾಡಿದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

 ಭೋಪಾಲ್: ಮಹಿಳೆಯೊಬ್ಬಳು 18 ಎಕರೆ ಆಸ್ತಿಗಾಗಿ 45 ವರ್ಷದ ವ್ಯಕ್ತಿಯೊಬ್ಬನನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಆತನನ್ನು ಹತ್ಯೆ ಮಾಡಿದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಪಡ್ವಾರ್ (ಖಿಟೋಲಾ) ಗ್ರಾಮದ ಇಂದ್ರಕುಮಾರ್ ತಿವಾರಿ ಎಂದು ಗುರುತಿಸಲಾಗಿದೆ. 

ಏನಿದು ಪ್ರಕರಣ?: ಇಂದ್ರಕುಮಾರ್ ತಿವಾರಿ, ಅರೆಕಾಲಿಕ ಶಿಕ್ಷಕ ಮತ್ತು ರೈತನಾಗಿದ್ದರು. ಕಳೆದ ತಿಂಗಳು ಪ್ರಸಿದ್ಧ ಗುರು ಅನಿರುದ್ಧಾಚಾರ್ಯ ಮಹಾರಾಜ್ ಅವರ ಆಧ್ಯಾತ್ಮಿಕ ಪ್ರವಚನದ ಸಂದರ್ಭದಲ್ಲಿ, ‘18 ಎಕರೆ ಭೂಮಿ ಹೊಂದಿದ್ದೇನೆ. ಆದರೆ ತನ್ನ ಆಸ್ತಿಯನ್ನು ನೋಡಿಕೊಳ್ಳಲು ಯಾರೂ ಇಲ್ಲ. ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ’ ಎಂದು ಹತಾಶೆ ವ್ಯಕ್ತಪಡಿಸಿದ್ದರು.

 ಈ ವಿಡಿಯೋ ವೈರಲ್‌ ಆಗಿತ್ತು. ಇದನ್ನೇ ವಂಚಕರು ದಾಳವಾಗಿ ಬಳಸಿಕೊಂಡಿದ್ದರು. ವಂಚಕಿ ಸಾಹಿಬಾ ಬಾನೋ ನಕಲಿ ಆಧಾರ್‌ ಕಾರ್ಡ್‌ ಮಾಡಿಸಿ, ಖುಷಿ ತಿವಾರಿ ಎಂದು ಹೆಸರು ಬದಲಿಸಿಕೊಂಡು, ಸಾಮಾಜಿಕ ಜಾಲತಾಣದ ಮೂಲಕ ಇಂದ್ರಕುಮಾರ್‌ರನ್ನು ಸಂಪರ್ಕಿಸಿದ್ದಳು. ಬಳಿಕ ಅವರನ್ನು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಕರೆಸಿ, ಮದುವೆಯಾಗಿದ್ದಳು. ಇದಾದ ಕೆಲವು ದಿನಗಳ ನಂತರ ಇಂದ್ರಕುಮಾರ್‌ ಶವ ಉತ್ತರ ಪ್ರದೇಶದ ಕುಶಿನಗರದ ಹತಾ ಕೊತ್ವಾಲಿ ಪ್ರದೇಶದ ಸುಕರೌಲಿಯಲ್ಲಿ ಪತ್ತೆಯಾಗಿತ್ತು. ಶವದ ಕತ್ತಿನಲ್ಲಿ ಚಾಕು ಸಿಲುಕಿಕೊಂಡಿತ್ತು.

ಇದೀಗ ಸಾಹಿಬಾಳೇ ಆತನನ್ನು ಕೊಂದಿದ್ದಾಲೆ ಎಂದು ಗೊತ್ತಾಗಿದೆ ಹಾಗೂ ಆಕೆಯನ್ನು ಬಂಧಿಸಲಾಗಿದೆ. ಆಕೆಯ ಸಹಚರರಿಗಾಗಿ ಬಲೆ ಬೀಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
ಅಣ್ಣಾಮಲೈ ರಸಮಲೈ ಎಂದು ರಾಜ್‌ ಠಾಕ್ರೆ ಕೀಳುಭಾಷೆ ಟೀಕೆ