ಮಣಿಪುರದಲ್ಲಿ ಮತ್ತೆ ಹಿಂಸೆ : ಮನೆಗೆ ನುಗ್ಗಿ ಮೂವರ ಹತ್ಯೆ

KannadaprabhaNewsNetwork |  
Published : Jun 06, 2026, 01:45 AM IST
Manipur

ಸಾರಾಂಶ

ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯ ಮನೆಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಮೂವರನ್ನು ಹತ್ಯೆಗೈದಿದ್ದಾರೆ. ಮತ್ತೊಂದೆಡೆ ಗಲಭೆಯಲ್ಲಿ 7 ಮನೆಗಳು ಬೆಂಕಿಗಾಹುತಿಯಾಗಿವೆ.

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯ ಮನೆಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಮೂವರನ್ನು ಹತ್ಯೆಗೈದಿದ್ದಾರೆ.  

7 ಮನೆಗಳು ಬೆಂಕಿಗಾಹುತಿ

ಮತ್ತೊಂದೆಡೆ ಗಲಭೆಯಲ್ಲಿ 7 ಮನೆಗಳು ಬೆಂಕಿಗಾಹುತಿಯಾಗಿವೆ.ಜಿಲ್ಲೆಯ ಲೊಯಿಬೋಲ್‌ ಖುಲ್ಲೆನ್‌ ಗ್ರಾಮದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಏಕಾಏಕಿ ಇಲ್ಲಿನ ನಾಗರಿಕರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. 

ಎರಡು ಕಡೆಯವರ ನಡುವೆ ನಡೆದ ಗುಂಡಿನ ಕಾಳಗ

 ಈ ವೇಳೆ ಎರಡು ಕಡೆಯವರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಿಂದ ಭಯಗೊಂಡು ಕೆಲವು ಗ್ರಾಮಸ್ಥರು ಜೀವ ಉಳಿಸಿಕೊಳ್ಳಲು ಕಾಡಿನಲ್ಲಿ ಅಡಗಿ ಕುಳಿತ ಪ್ರಸಂಗವೂ ನಡೆಯಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಸಿಜೆಐಗೆ ಸಿಜೆಪಿ ಥ್ಯಾಂಕ್ಸ್!
ಜಿರಳೆಗೆ ಕೊನೆಗೂ ಪ್ರಧಾನ್‌ ಬಲಿ