ಮಣಿಪುರದಲ್ಲಿ ಮತ್ತೆ ಹಿಂಸಾಚಾರಕ್ಕೆ 5 ಬಲಿ

KannadaprabhaNewsNetwork |  
Published : Sep 09, 2024, 01:32 AM IST
 ಮಣಿಪುರ | Kannada Prabha

ಸಾರಾಂಶ

ಕೆಲ ದಿನಗಳಿಂದ ಶಾಂತವಾಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಜಿರಿಬಾಂ ಬಿಲ್ಲೆಯಲ್ಲಿ ಕುಕಿ ಉಗ್ರರು ಹಾಗೂ ಮೈತೇಯಿ ಸಮುದಾಯದ ನಡುವೆ ನಡೆದ ಗುಂಡಿನ ಕಾಳಗದಲ್ಲಿ 5 ಜನರು ಸಾವನ್ನಪ್ಪಿದ್ದಾರೆ.

ಇಂಫಾಲ: ಕೆಲ ದಿನಗಳಿಂದ ಶಾಂತವಾಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಜಿರಿಬಾಂ ಬಿಲ್ಲೆಯಲ್ಲಿ ಕುಕಿ ಉಗ್ರರು ಹಾಗೂ ಮೈತೇಯಿ ಸಮುದಾಯದ ನಡುವೆ ನಡೆದ ಗುಂಡಿನ ಕಾಳಗದಲ್ಲಿ 5 ಜನರು ಸಾವನ್ನಪ್ಪಿದ್ದಾರೆ.

ಕಳೆದ ವಾರ ಕುಕಿ ಉಗ್ರರು ಮೈತೇಯಿ ಸಮುದಾಯದ ಜನರ ಮೇಲೆ ನಡೆಸಿದ ಡ್ರೋನ್‌ ಹಾಗೂ ರಾಕೆಟ್‌ ಬಾಂಬ್‌ ದಾಳಿ ಮಾಡಿದ್ದರು. ಈ ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಮತ್ತೆ ಹಿಂಸಾಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರಾಜಧಾನಿ ಇಂಫಾಲದಲ್ಲಿ ಡ್ರೋನ್‌ ದಾಳಿ ತಡೆ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಶಂಕಿತ ಕುಕಿ ಉಗ್ರರು ಶನಿವಾರ ಜಿರಿಬಾಂ ಜಿಲ್ಲಾ ಕೇಂದ್ರದಿಂದ 5 ಕಿ.ಮೀ ದೂರದ ಏಕಾಂತ ಪ್ರದೇಶವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿ ನಿದ್ದೆ ಮಾಡುತ್ತಿದ್ದ ಮೇಲೆ ದಾಳಿ ನಡೆಸಿ ಆತನನ್ನು ಹತ್ಯೆಗೈದಿದ್ದಾರೆ. ಈ ಸುದ್ದಿ ಎಲ್ಲೆಡೆ ಹಬ್ಬಿ ಕುಕಿ ಮತ್ತು ಮೈತೇಯಿ ಸಮುದಾಯದ ಜನರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ನಾಲ್ವರು ಕುಕಿ ಉಗ್ರರು ಸಾವನ್ನಪ್ಪಿದ್ದಾರೆ.

ಘಟನೆ ಬೆನ್ನಲ್ಲೇ ಮುಖ್ಯಂಂತ್ರಿ ಬೀರೇನ್‌ ಸಿಂಗ್‌, ಸರ್ಕಾರದ ಮಿತ್ರಪಕ್ಷಗಳ ಶಾಸಕರ ಜೊತೆ ತುರ್ತು ಸಭೆ ನಡೆಸಿದ್ದಾರೆ. ಬಳಿಕ ರಾಜ್ಯಪಾಲ ಎಲ್‌. ಆಚಾರ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯ ಮಾಹಿತಿ ನೀಡಿದ್ದಾರೆ.

ಈ ವರ್ಷ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶೀಘ್ರದಲ್ಲೇ ಆಲ್ಕೋಹಾಲ್‌ನಿಂದ ಓಡಾಡಲಿವೆ ಭಾರತದ ಕಾರುಗಳು
ಪುರುಷರ ಕೋಣೆಗೆ ಹೋಗ್ದೆ ಸ್ತ್ರೀ ರಾಜಕಾರಣಿಗಳು ಯಶಸ್ವಿ ಆಗಲ್ಲ: ಪಪ್ಪು