ಚೆನ್ನೈನ ಅಮೆರಿಕ ಕಾನ್ಸಲ್ ಜನರಲ್ ಆಗಿ ಮರಿಯಾನಾ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Mar 11, 2026, 01:45 AM ISTUpdated : Mar 11, 2026, 03:43 AM IST
Mariana

ಸಾರಾಂಶ

ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಜನರಲ್‌ನ ಕಾನ್ಸಲ್‌ ಆಗಿ ಮರಿಯಾನಾ ಎಲ್. ನೈಶುಲರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಂತರ ಮಾತನಾಡಿದ ಕಾನ್ಸಲ್‌ ಜನರಲ್‌ ದಕ್ಷಿಣ ಭಾರತದಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ ಎಂದು ಹೇಳಿದರು

ಚೆನ್ನೈ: ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಜನರಲ್‌ನ ಕಾನ್ಸಲ್‌ ಆಗಿ ಮರಿಯಾನಾ ಎಲ್. ನೈಶುಲರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. 

ದಕ್ಷಿಣ ಭಾರತದಲ್ಲಿ ಅಮೆರಿಕ ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ

ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್‌ ಜನರಲ್‌ ನೈಶುಲರ್‌ ಅವರು, ‘ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ. ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಕಾರ್ಯದರ್ಶಿ ರೂಬಿಯೋ ಮತ್ತು ರಾಯಭಾರಿ ಸರ್ಗಿಯೋ ಗೋರ್ ಅವರ ನೇತೃತ್ವದಲ್ಲಿ, ಅಮೆರಿಕನ್ನರು ಮತ್ತು ಭಾರತೀಯರಿಬ್ಬರಿಗೂ ಪಾಲುದಾರಿಕೆಯನ್ನು ಬಲಪಡಿಸುವತ್ತ ನಾವು ಗಮನ ಕೇಂದ್ರೀಕರಿಸಿದ್ದೇವೆ.  ವ್ಯಾಪಾರ ಸಂಬಂಧಗಳನ್ನು ವಿಸ್ತರಿಸಲು, ಅಮೆರಿಕನ್ ಉದ್ಯಮಗಳನ್ನು ಬೆಂಬಲಿಸಲು ಮತ್ತು ನಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಎದುರು ನೋಡುತ್ತಿದ್ದೇನೆ‘ ಎಂದು ಹೇಳಿದರು.  

ಮೊದಲು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ

ಚೆನ್ನೈಗೆ ಬರುವ ಮೊದಲು, ಕಾನ್ಸಲ್ ಜನರಲ್ ನೈಶುಲರ್ ತಾಷ್ಕೆಂಟ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯಲ್ಲಿ ರಾಜಕೀಯ ಮತ್ತು ಆರ್ಥಿಕ ವ್ಯವಹಾರಗಳ ಕೌನ್ಸಿಲರ್ ಆಗಿ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಜೆರುಸಲೇಂ ಮತ್ತು ಆಮ್ಮನ್ ರಾಯಭಾರ ಕಚೇರಿಗಳಲ್ಲಿ ಉಪ ಆರ್ಥಿಕ ಕೌನ್ಸಿಲರ್ ಆಗಿ, ಹಾಗೆಯೇ ವಾಷಿಂಗ್ಟನ್ , ದುಬೈ, ಸ್ಕೋಪೆ ಯೆ ಮತ್ತು ಮಾಸ್ಕೋಗಳಲ್ಲಿಯೂ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. 

ಮರಿಯಾನಾ ಅವರು ಅವರು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಅಮೆರಿಕದ ಹಿತಾಸಕ್ತಿ ಮತ್ತು ಅಮೆರಿಕ-ಭಾರತ ಸಂಬಂಧಗಳನ್ನು ಮುನ್ನಡೆಸಲಿದ್ದಾರೆ. ಮರಿಯಾನಾ ಪತಿ ಪೀಟರ್‌ ಕೂಡ ವಿದೇಶಾಂಗ ಸೇವೆ ಅಧಿಕಾರಿಯಾಗಿದ್ದು ವಾರ್ಸಾದ ಅಮೆರಿಕ ರಾಯಭಾರಿ ಕಚೇರಿಯಲ್ಲಿ ರಾಜಕೀಯ ಸಲಹೆಗಾರರಾಗಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಎಲ್‌ಪಿಜಿ ಪೂರೈಕೆ ವ್ಯತ್ಯಯ ಆಗದಂತೆ ಕಠಿಣ ಕಾಯ್ದೆ
ರಿಪೇರಿಯ ಯತ್ನ ವಿಫಲ : ಪಾಕ್‌ನಿಂದಲೇ ಮುರೀದ್ ಏರ್‌ಬೇಸ್‌ ಪೂರ್ಣ ಧ್ವಂಸ