ಕೊಲ್ಕತಾ: ಬಹುಭಾಷಾ ನಟ ಮಿಥುನ್ ಚಕ್ರವರ್ತಿಗೆ ಶನಿವಾರ ಮುಂಜಾನೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ನಮ್ಮ ತಂದೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಎಂಆರ್‌ಐ ಸೇರಿದಂತೆ ವಿವಿಧ ಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ ಎಂದು ಮಿಥುನ್ ಪುತ್ರ ಮಹಾ ಅಕ್ಷಯ್ ಚಕ್ರವರ್ತಿ ಮಾಹಿತಿ ನೀಡಿದ್ದಾರೆ.
ಹಿಂದಿ, ಬೆಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿರುವ ಮಿಥುನ್ ಇತ್ತೀಚೆಗೆ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದರು.