ಹಾಸನ ದುರಂತ ಹೃದಯವಿದ್ರಾವಕ : ಮೋದಿ ಕಂಬನಿ-ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

KannadaprabhaNewsNetwork |  
Published : Sep 14, 2025, 01:04 AM ISTUpdated : Sep 14, 2025, 05:30 AM IST
PM Narendra Modi Speech in Imphal

ಸಾರಾಂಶ

ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ, ‘ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.

 ಈ ದುರಂತದ ಸಮಯದಲ್ಲಿ ಮೃತರ ಕುಟುಂಬಸ್ಥರ ಪರವಾಗಿ ನಿಲ್ಲುತ್ತೇನೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಪರಿಹಾರವನ್ನು ಮತ್ತು ಗಾಯಾಳುಗಳಿಗೆ ₹50 ಸಾವಿರ ನೀಡಲಾಗುವುದು’ ಎಂದು ಬರೆದುಕೊಂಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’!
ಬಂಗಾಳದಲ್ಲಿ ಬಾಬ್ರಿ ಶೈಲಿ ಮಸೀದಿ ನಿರ್‍ಮಾಣ ಶುರು