ಚುನಾವಣೆ ಅರಿವಿಗಾಗಿ ಪಠ್ಯದಲ್ಲಿ ಮತದಾನ ಶಿಕ್ಷಣ ಅಳವಡಿಕೆ

KannadaprabhaNewsNetwork | Published : Nov 4, 2023 12:31 AM

ಸಾರಾಂಶ

ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಶಿಕ್ಷಣ ಇಲಾಖೆ, ಶಾಲೆ ಪಠ್ಯದಲ್ಲಿ ಚುನಾವಣೆ ಬಗ್ಗೆ ಅಳವಡಿಸಲು ಒಡಂಬಡಿಕೆ ಮಾಡಿಕೊಂಡಿದೆ.
ನವದೆಹಲಿ: ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಶಿಕ್ಷಣ ಇಲಾಖೆ, ಶಾಲೆ ಪಠ್ಯದಲ್ಲಿ ಚುನಾವಣೆ ಬಗ್ಗೆ ಅಳವಡಿಸಲು ಒಡಂಬಡಿಕೆ ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ, 6-12ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯದಲ್ಲಿ ಚುನಾವಣೆಗೆ ಸಂಬಂಧ ಪಟ್ಟಂತೆ ಮತದಾನ, ಜನಪ್ರತಿನಿಧಿ ಆಯ್ಕೆ, ಚುನಾವಣೆ ಪ್ರಕ್ರಿಯೆ ಹಾಗೂ ಮತದಾರರ ಜವಾಬ್ದಾರಿಯನ್ನು ತಿಳಿಸಿಕೊಡಲಾಗುವುದು. ಇದರೊಂದಿಗೆ ಶಾಲೆಗಳಲ್ಲಿ ಚುನಾವಣೆ ನಡೆಸುವುದರ ಮೂಲಕ ಮಕ್ಕಳಲ್ಲಿ ನಾಯಕತ್ವದ ಗುಣವನ್ನು ಹೆಚ್ಚಿರುವ ಕಾರ್ಯ ಮಾಡಲು ನಿರ್ಧರಿಸಿದೆ. ಶಿಕ್ಷಕರಿಗೂ ತರಬೇತಿ ನೀಡಲಾಗುತ್ತದೆ. ಜೊತೆಗೆ ರಾಜ್ಯ ಶಿಕ್ಷಣ ಸಂಸ್ಥೆಗಳಿಗೂ ಇದನ್ನು ಅಳವಡಿಸಿಕೊಳ್ಳಲು ಸೂಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Share this article