ಅಜಿತ್‌ ಅಗಲಿಕೆಯಿಂದ ಎನ್‌ಸಿಪಿ ಅತಂತ್ರ

KannadaprabhaNewsNetwork |  
Published : Jan 29, 2026, 02:00 AM IST
Sunethra

ಸಾರಾಂಶ

ಡಿಸಿಎಂ ಅಜಿತ್‌ ಪವಾರ್‌ ಅವರ ಅಗಲಿಕೆಯಿಂದ ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಆಧಾರಸ್ತಂಭ ಕುಸಿದಂತಾಗಿದ್ದರೆ, ಅತ್ತ ಅವರು ಕಟ್ಟಿ ಬೆಳೆಸಿದ್ದ ಎನ್‌ಸಿಪಿ ಅತಂತ್ರ ಸ್ಥಿತಿಗೆ ತಲುಪಿದೆ. ಅದರ ಭವಿಷ್ಯದ ಬಗ್ಗೆ ಸಾಕಷ್ಟು ಪ್ರಶ್ನೆಗಳೇಳುತ್ತಿದ್ದು, ಅಜಿತ್‌ ಇಲ್ಲದೆ ಅವರ ಬಣದ ಶಾಸಕರಿಗೆ ಅನಾಥ ಭಾವ ಕಾಡತೊಡಗಿದೆ.

 ಮುಂಬೈ: ಡಿಸಿಎಂ ಅಜಿತ್‌ ಪವಾರ್‌ ಅವರ ಅಗಲಿಕೆಯಿಂದ ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಆಧಾರಸ್ತಂಭ ಕುಸಿದಂತಾಗಿದ್ದರೆ, ಅತ್ತ ಅವರು ಕಟ್ಟಿ ಬೆಳೆಸಿದ್ದ ಎನ್‌ಸಿಪಿ (ರಾಷ್ಟ್ರವಾದಿ ಕಾಂಗ್ರೆಸ್) ಅತಂತ್ರ ಸ್ಥಿತಿಗೆ ತಲುಪಿದೆ. ಅದರ ಭವಿಷ್ಯದ ಬಗ್ಗೆ ಸಾಕಷ್ಟು ಪ್ರಶ್ನೆಗಳೇಳುತ್ತಿದ್ದು, ಅಜಿತ್‌ ಇಲ್ಲದೆ ಅವರ ಬಣದ ಶಾಸಕರಿಗೆ ಅನಾಥ ಭಾವ ಕಾಡತೊಡಗಿದೆ. 

ಯಾರೂ ಸಮರ್ಥ ನಾಯಕರಿಲ್ಲ

ಅಜಿತ್‌ರ ಎನ್‌ಸಿಪಿ ಪಕ್ಷದಲ್ಲಿ ಅವರನ್ನು ಬಿಟ್ಟರೆ ಬೇರೆ ಯಾರೂ ಸಮರ್ಥ ನಾಯಕರಿಲ್ಲ. ಹೀಗಿರುವಾಗ, ಆ ಪಕ್ಷದ ಭವಿಷ್ಯ ಮತ್ತು 41 ಶಾಸಕರ ಮುಂದಿನ ನಡೆಯ ಬಗ್ಗೆ ಕೆಲ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಉತ್ತರಾಧಿಕಾರತ್ವದ ಕಿತ್ತಾಟ ಹಾಗೂ ಸೈದ್ಧಾಂತಿಕ ಕಾರಣಗಳಿಂದಾಗಿ 2023ರಲ್ಲಿ ಅಜಿತ್‌ ಅವರು ಶರದ್‌ ಪವಾರ್‌ರ ಎನ್‌ಸಿಪಿಯಿಂದ ಬೇರ್ಪಟ್ಟು ತಮ್ಮದೇ ಬಣ ಕಟ್ಟಿಕೊಂಡಿದ್ದರು. ಈಗ ನಾಯಕತ್ವದ ಕೊರತೆಯಿಂದಾಗಿ ಅವು ಮತ್ತೆ ವಿಲೀನವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಅಜಿತ್‌-ಶರದ್‌ ನಡುವಿನ ಮನಸ್ಥಾಪ ತಗ್ಗಿ ಇಬ್ಬರೂ ಕೈಜೋಡಿಸಲು ಮುಂದಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಆ ಶಾಸಕರನ್ನು ತಮ್ಮ ಕೂಟದಲ್ಲೇ ಉಳಿಸಿಕೊಳ್ಳಲು ಖಂಡಿತ ಯತ್ನಿಸುತ್ತಾರೆ

ಹೀಗಿರುವಾಗ, ಸಿಎಂ ದೇವೆಂದ್ರ ಫಡ್ನವೀಸ್‌ ಅವರು ಆ ಶಾಸಕರನ್ನು ತಮ್ಮ ಕೂಟದಲ್ಲೇ ಉಳಿಸಿಕೊಳ್ಳಲು ಖಂಡಿತ ಯತ್ನಿಸುತ್ತಾರೆ. ಇದು ಯಶಸ್ವಿಯಾದಲ್ಲಿ ಎನ್‌ಸಿಪಿ (ಅಜಿತ್‌) ಶಾಸಕರು ಬಿಜೆಪಿ ಅಥವಾ ಶಿಂಧೆಯವರ ಶಿವಸೇನೆ ಸೇರಬಹುದು. ಅತ್ತ ರಾಜ್ಯಸಭೆ ಸದಸ್ಯೆಯಾಗಿರುವ ಅಜಿತ್‌ರ ಪತ್ನಿ ಸುನೇತ್ರಾ ಅವರು ಎನ್‌ಸಿಪಿಯನ್ನು ಉಳಿಸಿಕೊಳ್ಳಲು ಅದರ ಚುಕ್ಕಾಣಿ ಹಿಡಿಯಬಹುದು. ಅವರಿಗೆ, ರಾಜಕೀಯದಲ್ಲಿ ಪಳಗಿರುವ, ಅಜಿತ್‌ರ ಆಪ್ತರೂ ಆಗಿದ್ದ ಸಂಸದ ಸುನೀಲ್‌ ತತ್ಕರೆ ಸಾಥ್‌ ನೀಡಬಹುದು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ : 8 ತಿಂಗಳಲ್ಲಿ ₹3 ಲಕ್ಷ ಹೆಚ್ಚಳ!
ಮಹಾ ವಿಮಾನ ದುರಂತಕ್ಕೆ ಡಿಸಿಎಂ ಅಜಿತ್‌ ಪವಾರ್‌ ಬಲಿ