ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

KannadaprabhaNewsNetwork |  
Published : Aug 21, 2025, 01:00 AM IST
ನಾಮಪತ್ರ | Kannada Prabha

ಸಾರಾಂಶ

ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

 ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿ ಹಾಗೂ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿಯವರಿಗೆ ರಾಧಾಕೃಷ್ಣನ್ 4 ಸೆಟ್‌ಗಳ ನಾಮಪತ್ರವನ್ನು ಹಸ್ತಾಂತರಿಸಿದರು. ನಾಮಪತ್ರಕ್ಕೆ ಪ್ರಧಾನಿ ಮೋದಿ, ಸಚಿವರಾದ ಅಮಿತ್‌ ಶಾ, ರಾಜನಾಥ್ ಸಿಂಗ್ ಹಾಗೂ ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್ ಅನುಮೋದಕರಾಗಿ ಸಹಿ ಹಾಕಿದ್ದಾರೆ.

ನಾಮಪತ್ರವನ್ನು ಪರಿಶೀಲಿಸಿದ ಚುನಾವಣಾಧಿಕಾರಿ, ರಾಧಾಕೃಷ್ಣನ್ ಅವರಿಂದ ಸಹಿ ಪಡೆದುಕೊಂಡರು. ಆ ಬಳಿಕ ಮೋದಿಯವರಿಗೆ ಸ್ವೀಕೃತಿ ಪತ್ರವನ್ನು ನೀಡಿದರು.

ಪ್ರತಿಪಕ್ಷ ಇಂಡಿಯಾ ಕೂಟದ ಅಭ್ಯರ್ಥಿ ನ್ಯಾ. ಸುದರ್ಶನ್ ರೆಡ್ಡಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಆಸ್ಟ್ರೇಲಿಯಾದಲ್ಲಿ 426 ಕೆಜಿಯ ಗಾಂಧಿ ಕಂಚಿನ ಪ್ರತಿಮೆ ಧ್ವಂಸ, ಕಳವು
6 ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ