20 ಎನ್‌ಡಿಎ ಸಿಎಂ, 18 ಡಿಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ

KannadaprabhaNewsNetwork |  
Published : May 26, 2025, 12:21 AM ISTUpdated : May 26, 2025, 04:58 AM IST
PM Modi NDA CMs Meeting

ಸಾರಾಂಶ

ಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ನವದೆಹಲಿ: ಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು. ಎನ್‌ಡಿಎ ಆಡಳಿತವಿರುವ 20 ರಾಜ್ಯಗಳ ಮುಖ್ಯಮಂತ್ರಿಗಳು, 18 ಉಪಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ. ನಡ್ಡಾ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮದ ಕುರಿತು ಪ್ರಸ್ತಾವಿಸಿದ ಪ್ರಧಾನಿ ಮೋದಿ, ‘ಕದನ ವಿರಾಮವನ್ನು ಯಾವುದೇ 3ನೇ ವ್ಯಕ್ತಿಯ ಮಧ್ಯಸ್ಥಿಕೆಯಿಲ್ಲದೆ ದ್ವಿಪಕ್ಷೀಯವಾಗಿ ಒಪ್ಪಿಕೊಳ್ಳಲಾಯಿತು. ಪಾಕಿಸ್ತಾನವೇ ಕದನ ವಿರಾಮವನ್ನು ಬಯಸಿ, ನಮ್ಮನ್ನು ಸಂಪರ್ಕಿಸಿತು. ಇದರಲ್ಲಿ ಬೇರೆ ಯಾವುದೇ 3ನೇ ವ್ಯಕ್ತಿ ಭಾಗಿಯಾಗಿರಲಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಪ್ರತಿಯೊಂದು ವಲಯದಲ್ಲೂ ಅಂಚಿನಲ್ಲಿರುವವರನ್ನು ಮತ್ತು ಹಿಂದುಳಿದವರನ್ನು ಮುನ್ನೆಲೆಗೆ ತರುವ ನಮ್ಮ ಸರ್ಕಾರದ ಅಭಿವೃದ್ಧಿ ಮಾದರಿಯೊಂದಿಗೆ ಜಾತಿ ಎಣಿಕೆ ಹೊಂದಿಕೆಯಾಗುತ್ತದೆ’ ಎಂದು ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ದುಡಿಯುವ ಸ್ತ್ರೀಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಅಲಹಾಬಾದ್‌ ‘ಹೈ’
ಸಂಸತ್‌ ದಾಳಿಗೆ 24 ವರ್ಷ: ಹುತಾತ್ಮರಿಗೆ ಗಣ್ಯರ ಗೌರವ