ಇಡೀ ವಿಶ್ವವನ್ನೇ ಸ್ತಬ್ಧಬಾಗಿಸಿದ್ದ ಕೊರೋನಾ ಸೋಂಕಿನ ಕರಾಳ ಪರಿಣಾಮಗಳು ಇನ್ನೂ ಮಾಸದೇ ಇರುವಾಗಲೇ, ಚೀನಾದಲ್ಲಿ ಎಚ್‌ಎಂಪಿವಿ (ಹ್ಯೂಮನ್ ಮೆಟಾನ್ಯೂಮೋವೈರಸ್) ವೈರಸ್ ವ್ಯಾಪಕವಾಗಿ ಹಬ್ಬಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಕೋವಿಡ್ ವಿಷಯದಲ್ಲಿ ರಹಸ್ಯವಾಗಿ ನಡೆದುಕೊಂಡಂತೆ ಈಗಲೂ ಚೀನಾ ಮುಗುಮ್ಮಾಗಿರುವುದು ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ.
ಚೀನಾದ ಹಲವು ಭಾಗಗಳಲ್ಲಿ ಎಚ್‌ಎಂಪಿವಿ ಸೋಂಕು ವ್ಯಾಪಕವಾಗಿ ಹಬ್ಬಿದೆ. ಈ ಉಸಿರಾಟ ಸಂಬಂಧಿ ಸಮಸ್ಯೆಯಿಂದಾಗಿ ಸಾವಿರಾರು ಪ್ರಮಾಣದಲ್ಲಿ ಜನರು ಆಸ್ಪತ್ರೆಗೆ ದಾಂಗುಡಿ ಇಡುತ್ತಿದ್ದಾರೆ. ಪರಿಣಾಮ ಆಸ್ಪತ್ರೆಗಳೆಲ್ಲಾ ತುಂಬಿ ತುಳಕುತ್ತಿವೆ. ಭಾರೀ ಪ್ರಮಾಣದಲ್ಲಿ ಸಾವು ಕೂಡಾ ಸಂಭವಿಸಿದೆ. ಹೀಗಾಗಿ ಶವಾಗಾರ ಮತ್ತು ಸ್ಮಶಾನಗಳು ಕೂಡಾ ತುಂಬಿ ತುಳುಕುತ್ತಿವೆ ಸೋಂಕು ನಿಗ್ರಹದ ನಿಟ್ಟಿನಲ್ಲಿ ಚೀನಾ ಸರ್ಕಾರ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದೆ. ಕೊರೋನಾ ಸಂದರ್ಭದಲ್ಲಿ ಉಂಟಾದ ಅವ್ಯವಸ್ಥೆ ಮತ್ತೆ ನಿರ್ಮಾಣವಾಗುವುದನ್ನು ತಡೆಯಲು ಸೂಕ್ತ ಮಾರ್ಗಸೂಚಿ ರಚಿಸಲು ಸಿದ್ಧತೆ ನಡೆಯುತ್ತಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಯೋಗಯು ಎಚ್‌ಎಂಪಿವಿ ಸೋಂಕಿನ ವರದಿ, ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಏಜೆನ್ಸಿ ಸ್ಥಾಪಿಸಲು ಮತ್ತು ಸಿಸಿಟಿವಿ ಅಳವಡಿಸಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಸೋಂಕು ಹರಡುವಿಕೆ, ಲಕ್ಷಣ, ಚಿಕಿತ್ಸೆ:ಎಚ್‌ಎಂಪಿವಿ ಸೋಂಕು ಅತಿ ಹೆಚ್ಚಾಗಿ ಮಕ್ಕಳು ಹಾಗೂ ವೃದ್ಧರು ಹಾಗೂ ರೋಗನಿರೋಧಕ ಶಕ್ತಿಯ ಕೊರತೆ ಇರುವವರನ್ನು ಬಾಧಿಸುವಂತಹದ್ದಾಗಿದೆ. ಕೆಮ್ಮುವಾಗ ಅಥವಾ ಸೀನುವಾಗ ಹೊರಬರುವ ಕಣಗಳಿಂದ ಈ ಸೊಂಕು ಹರಡುತ್ತದೆ. ಸೋಂಕಿತರ ಸಂಪರ್ಕಕ್ಕೆ ಬರುವುದರಿಂದ ಹಾಗೂ ಕಲುಷಿತ ವಾತಾವರಣಕ್ಕೆ ತೆರೆದುಕೊಳ್ಳುವುದರಿಂದಲೂ ಎಚ್‌ಎಂಪಿವಿ ಸೋಂಕಿಗೆ ತುತ್ತಾಗುವ ಸಾಧ್ಯತೆಯಿದೆ.
ಮೊದಲು ಕಾಣಿಸಿಕೊಂಡಿದ್ದು ಎಲ್ಲಿ?
ಕೋವಿಡ್ ಬಂದಾಗ ಏನಾಗಿತ್ತು: