;Resize=(412,232))
ಬೆಂಗಳೂರು : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ ಹಾಗೂ ಪರಂಪರೆ ಪ್ರದರ್ಶಿಸಿದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ.
ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ‘ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಯೋಜಿಸಲಾಗಿತ್ತು. ಆದರೆ, ಈ ಸ್ತಬ್ಧಚಿತ್ರ ಪ್ರದರ್ಶಿಸುವ ಪ್ರಸ್ತಾಪ ಅಂಗೀಕೃತವಾಗದ ಹಿನ್ನೆಲೆಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಈ ಬಾರಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಪ್ರಗತಿ ಮೈದಾನದಲ್ಲಿ ಸ್ತಬ್ಧಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಗಳು ತಿಳಿಸಿವೆ.
ಆತ್ಮನಿರ್ಭರ ಭಾರತದ ಹಾದಿ ಸ್ವಾವಲಂಬಿ ರಾಜ್ಯಗಳೊಂದಿಗೆ ಪ್ರಾರಂಭವಾಗುತ್ತದೆ. ಕರ್ನಾಟಕವು ಕೃಷಿ ಕೈಗಾರಿಕೆ, ನಾವೀನ್ಯತೆ ಮತ್ತು ಸಂಸ್ಕೃತಿಯಲ್ಲಿ ಸಮತೋಲಿತ ಪ್ರಗತಿ ಮೂಲಕ ರಾಷ್ಟ್ರವನ್ನು ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದತ್ತ ಕೊಂಡೊಯ್ಯುತ್ತಿದೆ. ಆತ್ಮನಿರ್ಭರ ಭಾರತದ ದೃಷ್ಟಿಗೆ ಕರ್ನಾಟಕ ಸಮಗ್ರ ಕೊಡುಗೆ ನೀಡುತ್ತಿದೆ ಎಂಬುದು ಈ ಸ್ತಬ್ಧಚಿತ್ರದ ಸಂಕೇತವಾಗಿತ್ತು.
ಕಳೆದ ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೊತ್ಸವ ಪರೇಡ್‌ನಲ್ಲಿ ಐತಿಹಾಸಿಕ ನಗರವಾದ ಲಕ್ಕುಂಡಿಯ ವೈಶಿಷ್ಟ್ಯಪೂರ್ಣ ಹಾಗೂ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರ ಗಮನ ಸೆಳೆದಿತ್ತು.