ರಷ್ಯಾ ತೈಲ ಖರೀದಿ ನಿಲ್ಲಿಸಲಿದೆ ಭಾರತ : 6ನೇ ಸಲ ಟ್ರಂಪ್‌ ನುಡಿ

KannadaprabhaNewsNetwork |  
Published : Oct 27, 2025, 12:45 AM IST
Donald Trump America

ಸಾರಾಂಶ

ರಷ್ಯಾದಿಂದ ಭಾರತ ತೈಲ ಖರೀದಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಗಿತ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಭಾರತ ಈ ಕುರಿತು ಹೇಳಿಕೆ ನೀಡದೇ ಇದ್ದರೂ ಮೋದಿ ತಮಗೆ ಇಂಥದ್ದೊಂದು ಭರವಸೆ ನೀಡಿದ್ದಾರೆ ಎಂದು ಟ್ರಂಪ್‌  ಹೇಳಿದ್ದಾರೆ.

ವಾಷಿಂಗ್ಟನ್‌: ರಷ್ಯಾದಿಂದ ಭಾರತ ತೈಲ ಖರೀದಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಗಿತ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಭಾರತ ಈ ಕುರಿತು ಹೇಳಿಕೆ ನೀಡದೇ ಇದ್ದರೂ ಮೋದಿ ತಮಗೆ ಇಂಥದ್ದೊಂದು ಭರವಸೆ ನೀಡಿದ್ದಾರೆ ಎಂದು ಟ್ರಂಪ್‌ 6ನೇ ಸಲ ಹೇಳಿದ್ದಾರೆ.

ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್‌ ಶೃಂಗಕ್ಕೆ ತೆರಳುವ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೀವು ಇಂದು ನೋಡಿರಬಹುದು, ಚೀನಾ ರಷ್ಯಾದ ತೈಲ ಖರೀದಿಯನ್ನು ಗಣನೀಯವಾಗಿ ಕಡಿತಗೊಳಿಸುತ್ತಿದೆ ಮತ್ತು ಭಾರತವು ಸಂಪೂರ್ಣವಾಗಿ ನಿಲ್ಲಿಸುತ್ತಿದೆ. ನಾವು ರಷ್ಯಾದ ತೈಲ ಕಂಪನಿಗಳಾದ ರೋಸ್‌ನೆಫ್ಟ್‌ ಮತ್ತು ಲುಕಾಯ್ಲ್‌ ಮೇಲೆ ಸಂಪೂರ್ಣ ನಿರ್ಬಂಧ ಹೇರಿದ್ದೇವೆ’ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ಟ್ರಂಪ್‌ ಇಂಥದ್ದೇ ಹೇಳಿಕೆ

ಕೆಲ ದಿನಗಳ ಹಿಂದೆ ಟ್ರಂಪ್‌ ಇಂಥದ್ದೇ ಹೇಳಿಕೆ ನೀಡಿದಾಗ, ‘ಭಾರತ ತನ್ನ ರಾಷ್ಟ್ರೀಯ ಹಿತಾಸಕ್ತಿಗೆ ತಕ್ಕಂತೆ ವ್ಯಾಪಾರ ಮಾಡುತ್ತದೆಯೇ ಹೊರತು, ಯಾರದೇ ಒತ್ತಡಕ್ಕೆ ಮಣಿಯುವುದಿಲ್ಲ’ ಎಂದು ಸ್ಪಷ್ಟಪಡಿಸಿತ್ತು.

ಕಾಂಗ್ರೆಸ್‌ ವ್ಯಂಗ್ಯ:

ಟ್ರಂಪ್‌ ಹೇಳಿಕೆಯನ್ನಿಟ್ಟುಕ್ಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಿಪಕ್ಷ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ‘ಟ್ರಂಪ್‌ ಈ ಹಿಂದೆ ಭಾರತ ರಷ್ಯಾದ ತೈಲ ಖರೀದಿಯನ್ನು ಕಡಿಮೆ ಮಾಡಲಿದೆ ಎನ್ನುತ್ತಿದ್ದರು. ಆದರೆ ಈ ಬಾರಿ ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದಿದ್ದಾರೆ. ಕೌಲಾಲಂಪುರದಲ್ಲಿ ಇಂದು ಮೋದಿಯವರ ಅಪ್ಪುಗೆಯ ತಂತ್ರ ಕಾಣಿಸದಿರುವುದು ಆಶ್ಚರ್ಯವೇನಲ್ಲ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ವ್ಯಂಗ್ಯವಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ