ಒಡಿಶಾ ಸರ್ಕಾರಿ ಮಹಿಳಾ ನೌಕರರಿಗೆ ವರ್ಷಕ್ಕೆ 10 ಹೆಚ್ಚುವರಿ ಸಿಎಲ್‌

KannadaprabhaNewsNetwork |  
Published : Mar 13, 2024, 02:08 AM IST
ಮಹಿಳಾ ನೌಕರರು | Kannada Prabha

ಸಾರಾಂಶ

ಒಡಿಶಾದಲ್ಲಿ ಸರ್ಕಾರಿ ಮಹಿಳಾ ನೌಕರರಿಗೆ ಸಾಮಾನ್ಯ ರಜೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ವಾರ್ಷಿಕವಾಗಿ 25 ಸಾಮಾನ್ಯ ರಜೆಯನ್ನು ತೆಗೆದುಕೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ಅವಧಿಯಲ್ಲಿ ಪುರುಷರು ಕೇವಲ 15 ಸಾಮಾನ್ಯ ರಜೆಯನ್ನು ತೆಗೆದುಕೊಳ್ಳಬಹುದಾಗಿದೆ.

ಭುವನೇಶ್ವರ: ಒಡಿಶಾ ರಾಜ್ಯ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 15ರ ಬದಲು 25 ದಿನ ಸಾಮಾನ್ಯ ರಜೆ (ಸಿಎಲ್) ತೆಗೆದುಕೊಳ್ಳಲು ಅನುಮತಿ ನೀಡಿದೆ.

ಮಂಗಳವಾರ ಈ ಕುರಿತು ಅಧಿಕೃತವಾಗಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಆದೇಶ ಹೊರಡಿಸಿದ್ದು, ಈ ಪೈಕಿ ಹಿಂದೆ ಇದ್ದ 15 ದಿನಕ್ಕೆ ಇನ್ನು 10 ದಿನ ರಜೆಯನ್ನು ರಾಜ್ಯ ಸರ್ಕಾರ ಸೇರಿಸಿದೆ. ಮಹಿಳೆಯರಿಗೆ ಹೆಚ್ಚು ಸಮಸ್ಯೆ ಹಾಗೂ ಜವಾಬ್ದಾರಿ ಇರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಇಡೀ ದೇಶದಲ್ಲಿಯೇ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿ ತಂದ ಮೊದಲ ರಾಜ್ಯ ಒಡಿಶಾ ಆಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೊಲ್ಲಿ ಯುದ್ಧದಿಂದ ವಾಣಿಜ್ಯ ಸಿಲಿಂಡರ್‌ ಪೂರೈಕೆಯಲ್ಲಿ ಭಾರಿ ವ್ಯತಯ : ಗ್ಯಾಸ್‌ ಬರದಿದ್ದರೆ ಹೋಟೆಲ್‌ ಬಂದ್‌
ಲೆಬನಾನ್‌ ಮನೆ ಮೇಲೆ ಇಸ್ರೇಲ್‌ ಅಪಾಯಕಾರಿ ಬಿಳಿ ರಂಜಕ ಪ್ರಯೋಗ